Friday, April 19, 2024
Homeಜ್ಯೋತಿಷ್ಯಗುರುವಾರದ ನಿತ್ಯಭವಿಷ್ಯ: ರಾಯರ ಅನುಗ್ರಹ ಯಾವ ರಾಶಿಯ ಮೇಲಿರಲಿದೆ ?

ಗುರುವಾರದ ನಿತ್ಯಭವಿಷ್ಯ: ರಾಯರ ಅನುಗ್ರಹ ಯಾವ ರಾಶಿಯ ಮೇಲಿರಲಿದೆ ?

spot_img
- Advertisement -
- Advertisement -

ಮೇಷ:
ದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸು. ಆಸ್ತಿ ಖರೀದಿ ಸಾಧ್ಯ.ವೈವಾಹಿಕ ಚಿಂತೆ ಇರುವದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಧಾರ್ಮಿಕ ಕ್ಷೇತ್ರಗಳ ದರ್ಶನ ಯೋಗವಿದೆ.
ಶುಭ ಸಂಖ್ಯೆ:8

ವೃಷಭ:
ಗಂಭೀರ ಆರೋಪದಿಂದ ಮುಕ್ತರಾಗುವಿರಿ. ಅನುಕೂಲಕರ ವಾತಾವರಣ ಇರುವದರಿಂದ ಇನ್ನೂ ಹೆಚ್ಚಿನ ವ್ಯವಹಾರಿಕ ಸುಧಾರಣೆ ಮಾಡಲು ಪ್ರಯತ್ನಿಸಿರಿ.ಆರೋಗ್ಯದ ಸೂಕ್ತ ಕಾಳಜಿ ವಹಿಸಿರಿ.
ಶುಭ ಸಂಖ್ಯೆ: 3

ಮಿಥುನ:
ಕೆಲಸಗಳು ನಿಧಾನಗತಿಯಲ್ಲಿ ಸಾಗುವವು ಸೂಕ್ಷ್ಮತೆಯಿಂದ ವ್ಯವಹರಿಸಿರಿ. ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ಮನೋಚಿಂತಿತ ಕಾರ್ಯ ಕೈಗೂಡುವದು. ಹಳೆಯ ಸಾಲ ತೀರುವದು.
ಶುಭ ಸಂಖ್ಯೆ: 7

ಕರ್ಕ:
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ. ಕಠಿಣ ಪರಿಸ್ಥಿತಿಯಲ್ಲಿಯೂ ದುರ್ಲಭ ಸಾಧನೆ ಮಾಡುವಿರಿ. ಪರಿವಾರದಲ್ಲಿ ಸಂತಸವಿರುವದು. ಕೇಡುಬಯಸುವ ಜನರಿಗೆ ಅಂಜದೇ ಮುಂದುವರಿಯಿರಿ.
ಶುಭ ಸಂಖ್ಯೆ: 6

ಸಿಂಹ:
ಸಾಲಗಾರರ ತೊಂದರೆ ಇರುವದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ.
ಶುಭ ಸಂಖ್ಯೆ: 9

ಕನ್ಯಾ:
ನಿಶ್ಚಿತ ಕೆಲಸಕ್ಕೆ ಬೆಂಬಲ ಸಿಗುವದರಿಂದ ಉತ್ತಮ ಫಲ ದೊರೆಯುವದು. ಸುಮ್ಮನೇ ಕೂಡದ ಜಾಯಮಾನ ಇರುವದರಿಂದ ಹೊಸ ಯೋಜನೆಯನ್ನು ರೂಪಿಸುವಿರಿ. ಹಿಂದಿನ ಬಾಕಿ ವಸೂಲಾತಿಗೆ ಶ್ರಮಿಸಬೇಕಾಗುವದು.
ಶುಭ ಸಂಖ್ಯೆ: 2

ತುಲಾ:
ವಿಶ್ರಾಂತಿ ಇಲ್ಲದ ದುಡಿಮೆ ಬೇಸರ ತರುವದು. ಜವಾಬ್ದಾರಿಗಳ ಹಂಚಿಕೆ ಮಾಡುವ ಪ್ರಮೇಯ ಉಂಟಾಗುವದು. ಮಿತಿ ಮೀರಿದ ಆಲೋಚನೆಗಳು ದಿಕ್ಕು ತಪ್ಪಿಸುವ ಸಾಧ್ಯತೆ ಇದೆ. ಆರ್ಥಿಕ ಲಾಭ ಇಲ್ಲದಿದ್ದರೂ ಹಾನಿ ಇರುವದಿಲ್ಲ. ಶುಭ ಸಂಖ್ಯೆ: 5

ವೃಶ್ಚಿಕ:
ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ.
ಶುಭ ಸಂಖ್ಯೆ: 8

ಧನು:
ತಾಪತ್ರಯಗಳೆಲ್ಲ ದೂರವಾಗಿದ್ದು ಆರ್ಥಿಕ ಸ್ಥಿತಿ ಸುಧಾರಣೆಯಾಗುತ್ತದೆ. ವ್ಯಾಪಾರಾದಿ ಉದ್ಯಮಗಳು ಇಷ್ಟದಂತೆ ನಡೆಯುತ್ತದೆ. ಕೆಲವೊಮ್ಮೆ ಸಣ್ಣ ವಿಷಯಗಳಿಗೂ ಭಯ ತೋರಿದರೂ ಹಾನಿಯಿಲ್ಲ.
ಶುಭ ಸಂಖ್ಯೆ: 3

ಮಕರ:
ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ.
ಶುಭ ಸಂಖ್ಯೆ: 5

ಕುಂಭ:
ಅಲ್ಪ ತ್ರಾಸದಾಯಕ. ಗಡಿಬಿಡಿಯ ವಾತಾವರಣ, ಆರೋಗ್ಯದಲ್ಲಿ ಏರುಪೇರು ಸಂಭವ. ಮಹತ್ವದ ಕೆಲಸಗಳನ್ನು ಮುಂದೂಡುವದು ಒಳ್ಳೆಯದು. ಮಂಗಲಕಾರ್ಯ, ಹೆಸರು, ಕಡಲೆ ದಾನ ಮಾಡಿರಿ.
ಶುಭ ಸಂಖ್ಯೆ: 9

ಮೀನ:
ದಿಟ್ಟತನ, ಮನೋಸ್ಥೈರ್ಯ, ನೇರ,ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವದು.
ಶುಭ ಸಂಖ್ಯೆ: 4

- Advertisement -
spot_img

Latest News

error: Content is protected !!