Friday, March 29, 2024
Homeಜ್ಯೋತಿಷ್ಯಬುಧವಾರದ ನಿತ್ಯಭವಿಷ್ಯ: ಹೇಗಿರಲಿದೆ ಈ ದಿನದ ರಾಶಿಫಲ ಮತ್ತು ಅದೃಷ್ಟ ಸಂಖ್ಯೆ ?

ಬುಧವಾರದ ನಿತ್ಯಭವಿಷ್ಯ: ಹೇಗಿರಲಿದೆ ಈ ದಿನದ ರಾಶಿಫಲ ಮತ್ತು ಅದೃಷ್ಟ ಸಂಖ್ಯೆ ?

spot_img
- Advertisement -
- Advertisement -

ಮೇಷ:
ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು.
ಶುಭ ಸಂಖ್ಯೆ: 8

ವೃಷಭ:
ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು.
ಶುಭ ಸಂಖ್ಯೆ: 2

ಮಿಥುನ:
ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವುದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ.
ಶುಭ ಸಂಖ್ಯೆ: 5

ಕರ್ಕ:
ಉನ್ನತ ಹುದ್ದೆ ದೊರೆಯುವ ಸಾಧ್ಯತೆ ಇದೆ. ಸಾಧನೆಗೆ ಸೂಕ್ತ ಅವಕಾಶ ದೊರೆಯುವುದು. ಹಣಕಾಸಿನ ತೊಂದರೆಗಳು ಪರಿಹಾರವಾಗುವವು. ವ್ಯವಹಾರಗಳಲ್ಲಿ ಗೌಪ್ಯತೆ ಇರಲಿ. ಹಿತಶತ್ರುಗಳಿಂದ ತೊಂದರೆಯಾಗುವ ಸಧ್ಯತೆ ಇದೆ.
ಶುಭ ಸಂಖ್ಯೆ: 6

ಸಿಂಹ:
ವ್ಯವಹಾರಿಕ ಸಂಪರ್ಕಗಳು ಹೆಚ್ಚುವವು ಅದರಂತೆ ಧನದ ಮೂಲಗಳೂ ಹೆಚ್ಚುವವು. ಸಾಲ ಮರುಪಾವತಿಯಾಗುವುದು. ಮನೆಯಲ್ಲಿ ನೆಮ್ಮದಿ ಇರುವುದು. ಅವಿವಾಹಿತರಿಗೆ ಕಂಕಣಬಲ ಕೂಡಿಬರುವುದು.
ಶುಭ ಸಂಖ್ಯೆ: 8

ಕನ್ಯಾ:
ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೊಟ್ಟಸಾಲ ಮರುಪಾವತಿಯಾಗುವುದು.
ಶುಭ ಸಂಖ್ಯೆ: 3

ತುಲಾ:
ಸಾಲಗಾರರ ತೊಂದರೆ ಇರುವುದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವುದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ.
ಶುಭ ಸಂಖ್ಯೆ: 4

ವೃಶ್ಚಿಕ:
ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವುದು. ಆರ್ಥಿಕ ಅಭಿವೃದ್ಧಿ ಕಂಡುಬರುವುದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವುದು. ಶತ್ರುಗಳೂ ಸೌಮ್ಯರಾಗುವ ಕಾಲ ಇರುವುದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ.
ಶುಭ ಸಂಖ್ಯೆ: 1

ಧನು:
ಭವಿಷ್ಯತ್ತಿನ ಉಪೇಕ್ಷೆ ಮಾಡದೇ ಉಳಿತಾಯಕ್ಕೆ ಗಮನಹರಿಸಿರಿ. ಆಪತ್ತುಗಳ ಪರಿಹಾರಕ್ಕಾಗಿ ವ್ಯಥಾ ತಿರುಗಾಟದ ಸಂಭವವಿದೆ. ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ.
ಶುಭ ಸಂಖ್ಯೆ: 7

ಮಕರ:
ಸ್ವಜನರಲ್ಲಿ ಮನಸ್ತಾಪ. ದೇಹಾರೋಗ್ಯವೂ ಸರಿಯಿರದೆ ತಾಪದಾಯಕವಾಗುತ್ತದೆ. ಆದರೆ ಶ್ರೇಷ್ಠ ಜನರಿಂದ ಪುರಸ್ಕಾರ. ಸಾಂಸಾರಿಕ ದೃಷ್ಟಿಯಲ್ಲೂ ತೃಪ್ತಿದಾಯಕವಿದ್ದು ನೆಮ್ಮದಿ ಉಂಟಾಗುತ್ತದೆ.
ಶುಭ ಸಂಖ್ಯೆ: 9

ಕುಂಭ:
ವ್ಯಾಪಾರಾದಿ ಉದ್ಯಮಗಳಲ್ಲಿ ಪ್ರಗತಿಯಿದ್ದು ಧನಲಾಭ, ಐಶ್ವರ್ಯವೃದ್ಧಿಯಿದೆ. ಆದರೆ ವ್ಯವಹಾರಿಕ ಕಿರಿಕಿರಿ ಇರುವದು. ಅನಿರೀಕ್ಷಿತ ಧನಲಾಭವೂ ಇದೆ. ಕೈಗೊಂಡ ಕಾರ್ಯಗಳಿಗೆ ವಿಘ್ನ ತೋರಿದರೂ ನೆರವೇರುತ್ತದೆ.
ಶುಭ ಸಂಖ್ಯೆ: 2

ಮೀನ:
ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ.
ಶುಭ ಸಂಖ್ಯೆ: 4

- Advertisement -
spot_img

Latest News

error: Content is protected !!