Friday, April 26, 2024
Homeಜ್ಯೋತಿಷ್ಯಸೋಮವಾರದ ನಿತ್ಯಭವಿಷ್ಯ: ಈ ದಿನದ ನಿತ್ಯ ಪಂಚಾಂಗ ಮತ್ತು ನಿಮ್ಮ ರಾಶಿಫಲ..

ಸೋಮವಾರದ ನಿತ್ಯಭವಿಷ್ಯ: ಈ ದಿನದ ನಿತ್ಯ ಪಂಚಾಂಗ ಮತ್ತು ನಿಮ್ಮ ರಾಶಿಫಲ..

spot_img
- Advertisement -
- Advertisement -

ಪಂಚಾಂಗ : ಸೋಮವಾರ, 22.02.2021
ಸೂರ್ಯ ಉದಯ ಬೆ.06.39 / ಸೂರ್ಯ ಅಸ್ತ ಸಂ.06.27
ಚಂದ್ರ ಉದಯ ಮ.01.56 / ಚಂದ್ರ ಅಸ್ತ ರಾ.03.12
ಶಾರ್ವರಿ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಶುಕ್ಲ ಪಕ್ಷ / ತಿಥಿ: ದಶಮಿ (ಸಾ.05.17) / ನಕ್ಷತ್ರ: ಮೃಗಶಿರಾ (ಬೆ.10.58) / ಯೋಗ: ಪ್ರೀತಿ (ರಾ.05.22) / ಕರಣ: ಗರಜೆ-ವಣಿಜ್ (ಸಾ.05.17-ರಾ.05.47) / ಮಳೆ ನಕ್ಷತ್ರ: ಶತಭಿಷಾ / ಮಾಸ: ಕುಂಭ / ತೇದಿ: 11

ಮೇಷ:
ಗುರಿಸಾಧನೆಗೆ ಇದು ಸೂಕ್ತ ಸಮಯ. ಪ್ರಯತ್ನಿಸಿದ ಕಾರ್ಯಗಳು ಕೈಗೂಡುವವು. ವಿದ್ಯಾರ್ಥಿಗಳಿಗೆ ಉನ್ನತ ಪ್ರಶಸ್ತಿ ದೊರಕುವ ಸಾಧ್ಯತೆ ಇರುವುದು.
ಶುಭ ಸಂಖ್ಯೆ: 8

ವೃಷಭ:
ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ. ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವುದು.
ಶುಭ ಸಂಖ್ಯೆ: 1

ಮಿಥುನ:
ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವುದು. ಆರ್ಥಿಕ ಅಭಿವೃದ್ಧಿ ಕಂಡುಬರುವುದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವುದು. ಶತೃಗಳೂ ಸೌಮ್ಯರಾಗುವ ಕಾಲ ಇರುವುದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ.
ಶುಭ ಸಂಖ್ಯೆ: 7

ಕರ್ಕ:
ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವುದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ.
ಶುಭ ಸಂಖ್ಯೆ: 4

ಸಿಂಹ:
ಹೊಸ ಯೋಜನೆಗೆ ಸಂಬಂಧಿಸಿದಂತೆ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ.
ಶುಭ ಸಂಖ್ಯೆ: 1

ಕನ್ಯಾ:
ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ.
ಶುಭ ಸಂಖ್ಯೆ: 3

ತುಲಾ:
ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ.
ಶುಭ ಸಂಖ್ಯೆ: 9

ವೃಶ್ಚಿಕ:
ವ್ಯಾಪಾರದಲ್ಲಿ ಪ್ರಗತಿ ಇರುವುದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು.
ಶುಭ ಸಂಖ್ಯೆ: 6

ಧನು:
ನಿರೀಕ್ಷಿತ ಸರ್ವಕಾರ್ಯಗಳು ನೆರವೇರುತ್ತದೆ. ಆರ್ಥಿಕ ಮಟ್ಟವೂ ಏರಿ, ಸ್ಥಿರಪ್ರಾಪ್ತಿ, ಸಂಸಾರಸುಖ ಸಂಭ್ರಮಗಳಿರುತ್ತದೆ. ಶುಭ ಕಾರ್ಯ ಪ್ರಯತ್ನ ಫಲಕೊಡುತ್ತದೆ.
ಶುಭ ಸಂಖ್ಯೆ: 4

ಮಕರ:
ವ್ಯರ್ಥ ಚಿಂತೆ, ತಪ್ಪು ಕಲ್ಪನೆ, ನಿಷ್ಟೂರ ಮಾತುಗಳನ್ನು ಕೇಳುವ ಸಂಭವ, ಜನ್ಮಸ್ಥ ಶುಕ್ರ ಇರುವುದರಿಂದ ಆರ್ಥಿಕ ಸುಭದ್ರತೆ ಇರುವುದು. ವಿದ್ಯಾರ್ಥಿಗಳಿಗೆ ಪರಿಶ್ರಮ ಅವಶ್ಯಕ. ಮನೆಯಲ್ಲಿ ಸಂತೋಷವಿರುವುದು. ಗೋಸೇವೆಯಿಂದ ಕಷ್ಟಪರಿಹಾರ.
ಶುಭ ಸಂಖ್ಯೆ: 6

ಕುಂಭ:
ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ಮೊದಲು ಕಷ್ಟ ನಂತರದಲ್ಲಿ ಉತ್ತಮವಾದ ಫಲ ದೊರೆಯುವುದು. ಗುರುಬಲ ವೃದ್ಧಿಸುವುದು. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು.
ಶುಭ ಸಂಖ್ಯೆ: 7

ಮೀನ:
ಅಪೇಕ್ಷಿಸಿದ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಳ್ಳುವವು ಆಸ್ತಿ ವಿವಾದ ಸೃಜನರ ಅತೃಪ್ತಿ ಮುಂತಾದ ಕಲಹಗಳು ಪರಿಹಾರವಾಗಿ ಸುಖ, ಸಂತೃಪ್ತಿಯ ಯೋಗವಿದೆ. ವಿದ್ಯಾರ್ಥಿಗಳು ಉನ್ನತ ಮಟ್ಟದ ಫಲಿತಾಂಶವನ್ನು ಹೊಂದುವರು. ಸಭಾಸಮಾಜ ಕೀರ್ತಿ ಲಭಿಸುವುದು.
ಶುಭ ಸಂಖ್ಯೆ: 1

- Advertisement -
spot_img

Latest News

error: Content is protected !!