Friday, May 3, 2024
Homeಜ್ಯೋತಿಷ್ಯಬುಧವಾರದ ನಿತ್ಯ ಪಂಚಾಗ ಮತ್ತು ರಾಶಿಭವಿಷ್ಯ

ಬುಧವಾರದ ನಿತ್ಯ ಪಂಚಾಗ ಮತ್ತು ರಾಶಿಭವಿಷ್ಯ

spot_img
- Advertisement -
- Advertisement -

ನಿತ್ಯ ಪಂಚಾಂಗ:
ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣಪಕ್ಷ, ದ್ವಾದಶಿ ತಿಥಿ, ಬುಧವಾರ, ಶ್ರವಣ ನಕ್ಷತ್ರ,
ರಾಹುಕಾಲ : ಇಂದು ಬೆಳಿಗ್ಗೆ 12.26 ರಿಂದ ಇಂದು ಮಧ್ಯಾಹ್ನ 1.55 ತನಕ.
ಸೂರ್ಯೋದಯ: ಬೆಳಿಗ್ಗೆ 6.28. ಸೂರ್ಯಾಸ್ತ: ಸಂಜೆ 6.24.

ರಾಶಿಭವಿಷ್ಯ
ಮೇಷ:
ಒಳ್ಳೆಯ ಮಾತುಗಳಿಂದ ಸಂಬಂಧ ಸುಧಾರಿಸುವುದು. ಸ್ನೇಹಿತರಲ್ಲಿಯ ಮನಸ್ತಾಪ ದೂರಾಗುವುದು. ಶಕ್ಯತೆ ಮೀರಿ ದುಡಿಯುವ ಕಾರ್ಯಭಾರವಿರುವುದು. ಉದ್ಯೋಗದ ಹೊರತಾಗಿ ಬೇರೆ ಕೆಲಸಕ್ಕೂ ಗಮನಹರಿಸಿ.
ಶುಭ ಸಂಖ್ಯೆ: 6

ವೃಷಭ:
ಆಸ್ತಿ ವಿಷಯಕ್ಕೆ ಸಂಬಂಧಿಸಿಂತೆ ತೊಂದರೆಯಾಗುವ ಸಂಭವವಿದೆ. ಆದಾಯ ಉತ್ತಮವಾಗಿರುವುದು. ನೌಕರಿಯಲ್ಲಿ ಅಸಹಕಾರ ಎದುರಿಸಬೇಕಾಗುವುದು. ಗ್ರಹಸೌಖ್ಯವಿದ್ದರೂ ಮಾನಸಿಕ ನೆಮ್ಮದಿ ಇರಲಾರದು.
ಶುಭ ಸಂಖ್ಯೆ: 1

ಮಿಥುನ:
ವಾಸಸ್ಥಾನ, ಉದ್ಯೋಗಸ್ಥಾನ ಬದಲಾವಣೆಯ ಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವವು. ವ್ಯವಹಾರಿಕ ಸೂಕ್ಷ್ಮತೆಯಿಂದ ಹಾನಿ ತಪ್ಪಿಸಿರಿ. ವೃಥಾಚಿಂತೆ ಇರುವುದು. ಹೊಸ ವ್ಯವಹಾರಗಳು ಬೇಡ.
ಶುಭ ಸಂಖ್ಯೆ: 4

ಕರ್ಕ:
ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವುದು. ಬಂಧುಮಿತ್ರರ ಸಹಕಾರ ದೊರೆಯುವುದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವುದು. ಮನೆಯಲ್ಲಿ ಸಂತಸ ಮೂಡುವುದು. ಶುಭಕಾರ್ಯಗಳು ಜರುಗುವವು.
ಶುಭ ಸಂಖ್ಯೆ: 2

ಸಿಂಹ:
ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು. ಕೋಟ್​ನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು.
ಶುಭ ಸಂಖ್ಯೆ: 7

ಕನ್ಯಾ:
ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವುದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು.
ಶುಭ ಸಂಖ್ಯೆ: 9

ತುಲಾ:
ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮೊದಲು ವಿಚಾರಮಾಡಿ ಮುಂದುವರೆಯಿರಿ. ಉದ್ಯೋಗದ ಸ್ಥಾನ ಬದಲಾವಣೆಯ ಯೋಗವಿದೆ. ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಂಭವವಿದೆ. ಎಚ್ಚರಿಕೆ ವಹಿಸಿರಿ.
ಶುಭ ಸಂಖ್ಯೆ: 5

ವೃಶ್ಚಿಕ:
ನಿಶ್ಚಿತ ಆರ್ಥಿಕ ಸ್ಥಿತಿ ಇರುವದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.
ಶುಭ ಸಂಖ್ಯೆ: 8

ಧನು:
ಪರಿವಾರದಲ್ಲಿ ಹೊಸಕಳೆ ಬರುವುದು. ಕುಟುಂಬದಲ್ಲಿ ಸೌಖ್ಯ ಇರುವುದು. ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ. ವ್ಯವಹಾರಗಳು ಲಾಭದಾಯಕವಾಗಿ ಇರುವವು.
ಶುಭ ಸಂಖ್ಯೆ: 4

ಮಕರ:
ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ.
ಶುಭ ಸಂಖ್ಯೆ: 7

ಕುಂಭ:
ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವದು ಅಮಾಮಾನಕ್ಕೆ ಕಾರಣವಾಗದಂತೆ ವರ್ತಿಸಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವುದು. ಕೈಗೊಂಡ ಕಾರ್ಯ ಯಶಸ್ವಿ ಕಾಣುವುದು.
ಶುಭ ಸಂಖ್ಯೆ: 1

ಮೀನ:
ಉದ್ಯೋಗ ಬದಲಿ ಮಾಡುವುದು ಸದ್ಯ ಬೇಡ. ಹಣದ ಕೊರತೆ ಇರಲಾರದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಪಿತ್ರಾರ್ಜಿತ ಆಸ್ತಿ ದೊರೆಯುವ ಯೋಗವಿದೆ. ತಂದೆತಾಯಿಯ ವಿಷಯದಲ್ಲಿ ಚಿಂತೆ ಇರುವುದು.
ಶುಭ ಸಂಖ್ಯೆ: 9

- Advertisement -
spot_img

Latest News

error: Content is protected !!