Friday, April 26, 2024
Homeಜ್ಯೋತಿಷ್ಯಶನಿವಾರದ ರಾಶಿಫಲ: ಈ ರಾಶಿಯವರಿಗೆ ವ್ಯಾಪಾರದಲ್ಲಿ ಲಾಭವಾಗುವ ಸಾಧ್ಯತೆ

ಶನಿವಾರದ ರಾಶಿಫಲ: ಈ ರಾಶಿಯವರಿಗೆ ವ್ಯಾಪಾರದಲ್ಲಿ ಲಾಭವಾಗುವ ಸಾಧ್ಯತೆ

spot_img
- Advertisement -
- Advertisement -

ಮೇಷ:
ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವುದು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ.
ಶುಭ ಸಂಖ್ಯೆ: 5

ವೃಷಭ:
ವ್ಯಾಪಾರದಲ್ಲಿ ಪ್ರಗತಿ ಇರುವದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು.
ಶುಭ ಸಂಖ್ಯೆ: 2

ಮಿಥುನ:
ವ್ಯಾಪಾರದಲ್ಲಿ ಅದೃಷ್ಟ ಲಾಭವಿದೆ. ವಿದ್ಯಾರ್ಥಿಗಳ ಮನೋಭಿಲಾಷೆ ಈಡೇರುವುದು. ಮನೆಯ ಜವಾಬ್ದಾರಿಗಳು ಹೆಚ್ಚುವವು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ.
ಶುಭ ಸಂಖ್ಯೆ: 9

ಕಟಕ:
ಮಹಿಳೆಯರ ಇಷ್ಟಾರ್ಥ ಸಿದ್ಧಿಸುವದು.ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ.ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು.ನ್ಯಾಯಾಲಯದಲ್ಲಿ ಜಯ ದೊರೆಯುವುದು. ವಿದ್ಯೆಯಲ್ಲಿ ಸಾಧನೆ ಇರುವುದು.
ಶುಭ ಸಂಖ್ಯೆ: 7

ಸಿಂಹ:
ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆನಿಂತ ಕೆಲಸಗಳು ಮುಂದುವರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ.
ಶುಭ ಸಂಖ್ಯೆ: 4

ಕನ್ಯಾ:
ಅಂತಃಶತ್ರುಗಳ ಕಾಟ ಹೆಚ್ಚಾಗುವ ಲಕ್ಷಣವಿದೆ. ಹಳೆಯ ಸಮಸ್ಯೆಗಳು ಮತ್ತೆ ಎದುರಾಗುವ ಸಂಭವವಿದೆ.ಚಂಚಲತೆ ಬೇಡ, ಹಿಡಿದ ಕಾರ್ಯವನ್ನು ಪೂರ್ಣಗೊಳಿಸಿ.ಆರ್ಥಿಕ ಲಾಭವಿದೆ ಆದರೆ ವಿದ್ಯೆಯಲ್ಲಿ ಹಿನ್ನೆಡೆ ಕಂಡುಬರುವುದು.
ಶುಭ ಸಂಖ್ಯೆ: 8

ತುಲಾ:
ಎಲ್ಲವನ್ನು ಹಗುರವಾಗಿ ಕಾಣುವದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವುದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ.
ಶುಭ ಸಂಖ್ಯೆ: 1

ವೃಶ್ಚಿಕ:
ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಉನ್ನತ ಶಿಕ್ಷಣದ ಕನಸು ಈಡೇರುವುದು.
ಶುಭ ಸಂಖ್ಯೆ: 6

ಧನು:
ಯೋಜನಾಬದ್ಧ ಕೆಲಸಗಳೂ ಕೂಡ ಮುಂದೂಡುವ ಪ್ರಸಂಗವಿದೆ. ಆಪ್ತವಲಯದಲ್ಲಿ ಸಮಾಲೋಚಿಸಿರಿ. ಅನಿವಾರ್ಯ ಕರ್ತವ್ಯಗಳಿಗೆ ಸಮಯ ಹೊಂದಾಣಿಕೆ ಮಾಡುವ ಸಾಧ್ಯತೆ ಇದೆ. ಆರ್ಥಕ ಸಂಕಷ್ಟಗಳು ಎದುರಾಗುವವು.
ಶುಭ ಸಂಖ್ಯೆ: 6

ಮಕರ:
ಆಸೆ ಆಕಾಂಕ್ಷೆಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು.
ಶುಭ ಸಂಖ್ಯೆ: 7

ಕುಂಭ:
ಆರೋಗ್ಯಪೂರ್ಣತೆ, ಪ್ರಸನ್ನತೆ ಇರುವುದು. ಎಲ್ಲ ಕಾರ್ಯಗಳೂ ತಮ್ಮ ಮನಸ್ಸಿನಂತೆ ನಡೆಯುವವು. ಧನಲಾಭ, ಧಾರ್ಮಿಕ ಕಾರ್ಯ, ದೇವತಾ ಕ್ಷೇತ್ರ ದರ್ಶನ ಯೋಗವಿರುವುದು. ವ್ಯಾಪಾರ ಸಾಧಾರಣ.
ಶುಭ ಸಂಖ್ಯೆ: 9

ಮೀನ:
ದಿಟ್ಟತನ, ಮನೋಸ್ಥೈರ್ಯ, ನೇರ,ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವುದು.
ಶುಭ ಸಂಖ್ಯೆ: 3

- Advertisement -
spot_img

Latest News

error: Content is protected !!