Friday, May 3, 2024
Homeಜ್ಯೋತಿಷ್ಯಸೋಮವಾರದ ರಾಶಿಫಲ: ಈ ದಿನ ಯಾವ ರಾಶಿಯವರಿಗೆ ಹೇಗಿದೆ ಗೊತ್ತಾ?

ಸೋಮವಾರದ ರಾಶಿಫಲ: ಈ ದಿನ ಯಾವ ರಾಶಿಯವರಿಗೆ ಹೇಗಿದೆ ಗೊತ್ತಾ?

spot_img
- Advertisement -
- Advertisement -

ಮೇಷ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವುದು.

ವೃಷಭ: ಕೆಲಸಗಳು ನಿಧಾನಗತಿಯಲ್ಲಿ ಸಾಗುವವು ಸೂಕ್ಷ್ಮತೆಯಿಂದ ವ್ಯವಹರಿಸಿರಿ. ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ಮನೋಚಿಂತಿತ ಕಾರ್ಯ ಕೈಗೂಡುವುದು. ಹಳೆಯ ಸಾಲ ತೀರುವುದು.

ಮಿಥುನ: ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ.

ಕಟಕ: ಉದಾಸೀನತೆಯಿಂದ ಕಾರ್ಯಹಾನಿ ಸಂಭವ. ಅನುಮಾನಗಳು ಮೂಡಿ ಕೈಗೊಂಡ ಕಾರ್ಯಕ್ಕೆ ವಿಘ್ನ ಉಂಟಾಗುವ ಸಂಭವವಿದೆ. ಸಾಮಾಜಿಕ ಗೌರವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗುವಿರಿ.

ಸಿಂಹ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವುದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಯೆಗಳು ಪರಿಹಾರವಾಗುವವು.

ಕನ್ಯಾ: ಹೊಸ ಆಲೋಚನೆಯೊಂದು ಕಾರ್ಯರೂಪಕ್ಕೆ ಬರುವುದು. ಸಹವರ್ತಿಗಳ ಅಸಹಕಾರ ಇದ್ದರೂ ತೊಂದರೆ ಆಗಲಾರದು. ಅನಪೇಕ್ಷಿತ ಸ್ಥಾನ ಬದಲಾವಣೆ ಆಗುವ ಸಾಧ್ಯತೆ ಇದೆ. ಸರಿಯಾದ ಧ್ಯೇಯದಿಂದ ಸಮಾಧಾನ ಇರುವುದು.

ತುಲಾ: ಧಾರ್ಮಿಕ ಕ್ಷೇತ್ರದಲ್ಲಿ ಗೌರವ ಸಮ್ಮಾನಗಳು ದೊರೆಯುವವು. ಅತಿಯಾದ ನಿರೀಕ್ಷೆಯಿಂದ ಅಸಮಾಧಾನ ಕಂಡುಬರುವುದು. ದೂರುವವರೇ ಹೊಗಳಿದರೂ ನೆಮ್ಮದಿ ಇರಲಾರದು. ಸ್ವಯಂ ಪ್ರತಿಷ್ಟೆಗೆ ಧನವ್ಯಯ ಆಗುವ ಸಾಧ್ಯತೆ ಇದೆ.

ವೃಶ್ಚಿಕ: ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವುದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ.

ಧನು: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ.

ಮಕರ: ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ.

ಕುಂಭ: ದಿಟ್ಟತನ, ಮನೋಸ್ಥೈರ್ಯ, ನೇರ, ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವುದು.

ಮೀನ: ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು.

- Advertisement -
spot_img

Latest News

error: Content is protected !!