Friday, May 3, 2024
Homeಕರಾವಳಿಉಡುಪಿಬೆಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಮತ್ತು ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳ ಮತದಾರರ ಸ್ನೇಹ ಸಮ್ಮಿಲನ

ಬೆಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಮತ್ತು ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳ ಮತದಾರರ ಸ್ನೇಹ ಸಮ್ಮಿಲನ

spot_img
- Advertisement -
- Advertisement -

ಬೆಂಗಳೂರು:ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿ ವತಿಯಿಂದ ಬೆಂಗಳೂರಿನಲ್ಲಿ ನೆಲೆಸಿರುವ ಉಡುಪಿ-ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಮತದಾರರ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಪುಕ್ಕಟೆ ಕಾರ್ಯಕ್ರಮಗಳನ್ನು ಘೋಷಿಸಿ ಇಡೀ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದ್ದು, ಬಹುಶಃ ಇದನ್ನು ಸುಧಾರಿಸಲು ನಮಗೆ 10 ವರ್ಷ ಬೇಕಾಗಬಹುದು ಮತ, ಇರುವವರು ಹಿಂದಿನ ದಿನವೇ ಬಂದು ಮತ ಚಲಾಯಿಸಿ ಎಂದು ವಿನಂತಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು‌ ಕಾರ್ಕಳ ಶಾಸಕ ವಿ. ಸುನೀಲ್‍ಕುಮಾರ್ ಮಾತನಾಡಿ, ಅಭಿವೃದ್ಧಿಪರ ಆಡಳಿತಕ್ಕಾಗಿ ಮೋದಿಯವರಿಗೆ ಹಾಗೂ ಬಿಜೆಪಿಗೆ ಮತ ನೀಡಿ ಎಂದು ಮನವಿ ಮಾಡಿದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ ಕಾಮತ್ ಮತ್ತು ಹರೀಶ್ ಪೂಂಜ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!