Thursday, June 25, 2026
HomeUncategorizedಆರು ತಿಂಗಳಲ್ಲಿ ಪಡೀಲ್ ಗೆ ದ.ಕ. ಜಿಲ್ಲಾಧಿಕಾರಿ ಕಚೇರಿ ಶಿಫ್ಟ್:ಮಂಗಳೂರಿನಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ...

ಆರು ತಿಂಗಳಲ್ಲಿ ಪಡೀಲ್ ಗೆ ದ.ಕ. ಜಿಲ್ಲಾಧಿಕಾರಿ ಕಚೇರಿ ಶಿಫ್ಟ್:ಮಂಗಳೂರಿನಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿಕೆ

- Advertisement -
- Advertisement -

ಮಂಗಳೂರು: ಪಡೀಲ್ ನಲ್ಲಿ ನಿರ್ಮಾಣ ಹಂತದಲ್ಲಿರುವ ನೂತನ ಜಿಲ್ಲಾಧಿಕಾರಿ ಕಚೇರಿ‌ ಸ್ಥಳಕ್ಕೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಇಂದು ಭೇಟಿ ನೀಡಿ‌ ಪರಿಶೀಲನೆ ನಡೆಸಿದರು.

ಐದು ವರ್ಷಗಳ ಹಿಂದೆ‌ 5.8 ಎಕರೆ ಜಾಗದಲ್ಲಿ 2.26 ಲಕ್ಷ ಚದರ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಕಟ್ಟಡ ಕಾಮಗಾರಿ ಅನುದಾನದ ಕೊರತೆಯಿಂದಾಗಿ ಅರ್ಧಕ್ಕೆ ಸ್ಥಗಿತಗೊಂಡಿತ್ತು.ಕಟ್ಟಡ ಪರಿಶೀಲನೆ ವೇಳೆ ಅಗತ್ಯಕ್ಕಿಂತ ಹೆಚ್ಚು ಹಣ ಖರ್ಚು ಮಾಡಲಾಗಿದೆ ಎಂದು ಅಧಿಕಾರಿಗಳ ವಿರುದ್ಧ ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.

ಮೊದಲ ಹಂತವಾಗಿ ಆರು ತಿಂಗಳ ಒಳಗಾಗಿ ಜಿಲ್ಲಾಧಿಕಾರಿ ಕಚೇರಿ ಶಿಫ್ಟ್ ಮಾಡುತ್ತೇವೆ, ಕಚೇರಿಗೆ ಬೇಕಾದ ಅಗತ್ಯ ಸೌಲಭ್ಯಗಳ ಕಾಮಗಾರಿಗೆ ಟೆಂಡರ್ ಮಾಡುತ್ತೇವೆ, 2024 ರಲ್ಲಿ ಜಿಲ್ಲಾಧಿಕಾರಿ ಕಚೇರಿಯ ಎಲ್ಲಾ ಕಾಮಗಾರಿ ಪೂರ್ಣಗೊಳ್ಳುತ್ತದೆ ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿಕೆ ನೀಡಿದ್ದಾರೆ‌.

ಸಿದ್ದರಾಮಯ್ಯ ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ಪಡೀಲ್ ನಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು.

- Advertisement -

Latest News

error: Content is protected !!