Monday, May 13, 2024
Homeಕರಾವಳಿಮಂಗಳೂರು: ಮಾಸ್ಕ್ ಧರಿಸದವರಿಗೆ ಸ್ವತಃ ರಸ್ತೆಗಿಳಿದು ಕ್ಲಾಸ್ ತೆಗೆದುಕೊಂಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ

ಮಂಗಳೂರು: ಮಾಸ್ಕ್ ಧರಿಸದವರಿಗೆ ಸ್ವತಃ ರಸ್ತೆಗಿಳಿದು ಕ್ಲಾಸ್ ತೆಗೆದುಕೊಂಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ

spot_img
- Advertisement -
- Advertisement -

ಮಂಗಳೂರು‌: ಜಿಲ್ಲೆಯಲ್ಲಿ ಕೋವಿಡ್‌-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಮಂಗಳೂರು ಪೊಲೀಸರು ನಗರದ ಪೆಟ್ರೋಲ್‌‌ ಬಂಕ್‌ ಸೇರಿದಂತೆ ಮಾಲ್‌ಗಳು, ಜ್ಯುವೆಲ್ಲರಿ ಶಾಪ್‌, ಖಾಸಗಿ ಬಸ್‌ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ದಿಢೀರನೇ ಮಾಸ್ಕ್‌‌ ಡ್ರೈವ್‌‌ ನಡೆಸಿದ್ದು, ಮಾಸ್ಕ್‌ ಹಾಕುವಂತೆ ಹೇಳಿದರೂ ಕೇಳದ ಪೆಟ್ರೋಲ್‌ ಬಂಕ್‌ ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಜಿಲ್ಲಾಧಿಕಾರಿ ಡಾ.ರಾಜೇಂದ್ರ, ಡಿಸಿಪಿ ಹರಿರಾಂ ಶಂಕರ್‌ ಅವರ ನೇತೃತ್ವದಲ್ಲಿ ಡ್ರೈ‌ವ್‌ ನಡೆಸಿದ್ದು, ಮಾಸ್ಕ್‌‌ ಹಾಕದವರನ್ನು ಡಿ.ಸಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ನಿಯಮ ಉಲ್ಲಂಘಿಸಿದ ಬಸ್‌ಗಳನ್ನು ಸೀಜ್‌ ಮಾಡಿದ್ದು, ಸಿಟಿ ಸೆಂಟರ್‌ ಮಾಲ್‌ನ ಮೂರು ಶಾಪ್‌ಗಳನ್ನು ಬಂದ್‌ ಮಾಡಲು ಆದೇಶಿಸಿದ್ದಾರೆ.

ಕೋವಿಡ್ ಮಾರ್ಗಸೂಚಿಯನ್ವಯ ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಈ ಬಗ್ಗೆ ಮಾ.15ರಂದು ದ.ಕ. ಜಿಲ್ಲಾಧಿಕಾರಿ ಪರಿಷ್ಕೃತ ಆದೇಶ ಹೊರಡಿಸಿದ್ದರು. ಆದಾಗ್ಯೂ ಸಾರ್ವಜನಿಕರು ಮಾಸ್ಕ್ ಧರಿಸಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಬೇಸತ್ತ ಜಿಲ್ಲಾಧಿಕಾರಿ ಮಂಗಳೂರು ನಗರದಲ್ಲಿ ಕಾರ್ಯಾಚರಣೆ ನಡೆಸಿದರು.

ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ, ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ಸ್ವಯಂ ಮೇಲ್ವಿಚಾರಣೆ ನಡೆಸಿಕೊಂಡು ಜ್ವರ, ಶೀತ, ಕೆಮ್ಮು, ಗಂಟಲು ನೋವು, ಉಸಿರಾಟದ ಸಮಸ್ಯೆ ಹಾಗೂ ಕೋವಿಡ್ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ವೈದ್ಯಕೀಯ ನೆರವು ಪಡೆಯಬೇಕು. ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಪ್ರತಿಯೊಬ್ಬ ನಾಗರಿಕರು ತಪ್ಪದೇ ಮಾಸ್ಕ್ ಧರಿಸಿಕೊಳ್ಳುವುದರೊಂದಿಗೆ ಸುರಕ್ಷಿತ ಅಂತರ ಕಾಯ್ದುಕೊಂಡು ಕೈಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದರು.

- Advertisement -
spot_img

Latest News

error: Content is protected !!