Saturday, July 5, 2025
Homeಇತರಲಸಿಕೆ ನೀಡಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಉತ್ತಮ ಸಾಧನೆ ಮಾಡಿದೆ: ಅಂಗಾರ

ಲಸಿಕೆ ನೀಡಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಉತ್ತಮ ಸಾಧನೆ ಮಾಡಿದೆ: ಅಂಗಾರ

spot_img
- Advertisement -
- Advertisement -

ಮಂಗಳೂರು: ಲಸಿಕೆ ನೀಡಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಉತ್ತಮ ಸಾಧನೆ ಮಾಡಿದೆ. ಇದುವರೆಗೆ 22,93,151 ಮಂದಿಗೆ ಲಸಿಕೆ ನೀಡಲಾಗಿದ್ದು ಬಾಕಿ ಉಳಿದಿರುವವರು ಕೂಡ ಲಸಿಕೆ ಪಡೆಯುವಂತೆ ಮನವೊಲಿಸುವ ಕೆಲಸ ನಡೆಸಲಾಗುತ್ತಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್‌. ಅಂಗಾರ ತಿಳಿಸಿದ್ದಾರೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶೇ. 88 ಮಂದಿ ಪ್ರಥಮ ಹಾಗೂ ಶೇ. 51 ಮಂದಿ ಎರಡನೇ ಡೋಸ್‌ ಲಸಿಕೆ ಪಡೆದಿದ್ದಾರೆ. ಸರಕಾರದ ವಿವಿಧ ಇಲಾಖೆ, ಸಂಘ ಸಂಸ್ಥೆಗಳ ಸಹಕಾರದಿಂದ ಇದು ಸಾಧ್ಯವಾಗಿದೆ. ಲಸಿಕೆ ಪಡೆಯಲು ಹಿಂಜರಿಯುತ್ತಿದ್ದವರೂ ಕೂಡ ಈಗ ಪಡೆದುಕೊಳ್ಳುತ್ತಿದ್ದಾರೆ ಎಂದರು.

ಮಕ್ಕಳ ಸುರಕ್ಷತೆಗೆ ಕ್ರಮ
ಪ್ರಾಥಮಿಕ ಶಾಲೆಗಳ ಪುನರಾರಂಭ ಸಂದರ್ಭ ಜಿಲ್ಲಾಡಳಿತದಿಂದಲೇ ಶಾಲೆಗಳಿಗೆ ಸ್ಯಾನಿಟೈಸ್‌ ಒದಗಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಸುರಕ್ಷತೆಗಾಗಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

- Advertisement -
spot_img

Latest News

error: Content is protected !!