Saturday, June 6, 2026
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಖರೀದಿಗೆ ಅವಕಾಶ: ಜಿಲ್ಲಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಖರೀದಿಗೆ ಅವಕಾಶ: ಜಿಲ್ಲಾಧಿಕಾರಿ

- Advertisement -
- Advertisement -

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಸೋಮವಾರದಿಂದ ಲಾಕ್‌ಡೌನ್ ಸಡಿಲಿಕೆ ಮಾಡಲಾಗಿದ್ದು, ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ಸಾಮಗ್ರಿಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಜೂ. 28ರವರೆಗೆ ಅಥವಾ ಜು.5ರವರೆಗೆ ಲಾಕ್ ಡೌನ್ ಸಡಿಲಿಕೆ ಬಗ್ಗೆ ಸಧ್ಯ ನಿರ್ಧಾರವಾಗಿಲ್ಲ. ಮುಂದಿನ ದಿನಗಳಲ್ಲಿ ಜನಪ್ರತಿನಿಧಿಗಳ ಜೊತೆ ಮಾತುಕತೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರ್ಮಿಕ ಕೇಂದ್ರಗಳ ಓಪನ್ ಇದೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ಆದರೆ ಯಾವುದೇ ಕಾರಣಕ್ಕೂ 2ವಾರ ಧಾರ್ಮಿಕ ಕೇಂದ್ರ ತೆರೆಯುವಂತಿಲ್ಲ ಎಂದು ಡಿಸಿ ಹೇಳಿದ್ದಾರೆ.

- Advertisement -

Latest News

error: Content is protected !!