ದಕ್ಷಿಣಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅರಣ್ಯ ಇಲಾಖೆ ಸಹಯೋಗದಲ್ಲಿ ನಗರದ ಪತ್ರಿಕಾ ಭವನದ ಆವರಣದಲ್ಲಿ ಜೂನ್ 25 ರಂದು ಶನಿವಾರ ಬೆಳಿಗ್ಗೆ 9.30ಕ್ಕೆ ‘ಹಸಿರೇ ಉಸಿರು’ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ನೆರವೇರಿಸಲಿದ್ದಾರೆ. ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಪತ್ರಕರ್ತರಿಗೆ ಹಣ್ಣು ಹಂಪಲು ಬೀಜ ವಿತರಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ವಹಿಸಲಿದ್ದಾರೆ.
ಇನ್ನೂ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅರಣ್ಯ ಇಲಾಖೆ ಮಂಗಳೂರು ವಲಯದ ಉಪಅರಣ್ಯ ಸಂರಕ್ಷಣಾಧಿಕಾರಿ ಡಾ. ದಿನೇಶ್ ಕುಮಾರ್ ವೈ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್, ಮಂಗಳೂರು ಅರಣ್ಯ ಸಂಚಾರಿ ದಳದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್, ವಲಯ ಅರಣ್ಯ ಅಧಿಕಾರಿ ಪ್ರಶಾಂತ್ ಪೈ, ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಅಧ್ಯಕ್ಷ ಸ್ವರ್ಣಸುಂದರ್, ಕುದುರೆಮುಖ ಕಬ್ಬಿಣ ಹಾಗೂ ಅದಿರು ಕಂಪನಿ ಮುಖ್ಯ ಪ್ರಬಂಧಕ ರಾಮಕೃಷ್ಣ, ಹಿರಿಯ ಪ್ರಬಂಧಕ ಮುರುಗೇಶ್, ಅರಣ್ಯ ಮಿತ್ರ ಮೋಹನ್ ಉಳ್ಳಾಲ್ ಭಾಗವಹಿಸಲಿದ್ದಾರೆ.
ಪ್ರತಿಕಾ ಪ್ರಕಟಣೆಗೆ ಮಾಹಿತಿ ನೀಡಿದ ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಮಂಗಳೂರು ಅವರು, ಕಾರ್ಯಕ್ರಮದಲ್ಲಿ ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್, ರಾಜ್ಯ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ್ ಶೆಟ್ಟಿ ಬಾಳ ಅವರ ಗೌರವ ಉಪಸ್ಥಿತಿ ಇರಲಿದೆ ಎಂದು ತಿಳಿಸಿದ್ದಾರೆ.


