Saturday, April 27, 2024
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆ.11ರವರೆಗೆ ಭಾರೀ ಮಳೆ: ರೆಡ್, ಆರೇಂಜ್ ಅಲರ್ಟ್ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆ.11ರವರೆಗೆ ಭಾರೀ ಮಳೆ: ರೆಡ್, ಆರೇಂಜ್ ಅಲರ್ಟ್ ಘೋಷಣೆ

spot_img
- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ ನಾಳೆ ಭಾರೀ ಮಳೆ ಬರಲಿದೆ. ಹೀಗಾಗಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಹಾಗೆಯೆ ಆಗಸ್ಟ್ 10 ಮತ್ತು 11ರಂದು ವ್ಯಾಪಕ ಮಳೆಯ ಹಿನ್ನಲೆಯಲ್ಲಿ ಆರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಜಿಲ್ಲೆಯಲ್ಲಿ ವಾರದಿಂದ ವ್ಯಾಪಕ ಮಳೆ ಸುರಿಯುತ್ತಿದ್ದು, ಇನ್ನು ಹಲವು ದಿನಗಳವರೆಗೆ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಆ.9ರಂದು ‘ರೆಡ್ ಅಲರ್ಟ್’ ಘೋಷಿಸಿದ ದಿನ ಸುಮಾರು 204.4 ಮಿ.ಮೀ.ವರೆಗೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ವ್ಯಾಪಕ ಮಳೆಯಾಗುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕೆಲವೊಂದು ಸಾರ್ವಜನಿಕರಿಗೆ ಮುನ್ಸೂಚನೆಯನ್ನು ನೀಡಿದ್ದು

  • – ಸಾರ್ವಜನಿಕರು ನದಿ ಹಾಗೂ ಸಮುದ್ರಗಳಿಗೆ ಇಳಿಯದಂತೆ ಎಚ್ಚರದಿಂದಿರಬೇಕು
  • – ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳಿಂದ ದೂರವಿರಬೇಕು.
  • – ಎಲ್ಲಾ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ತಮ್ಮ ಕೇಂದ್ರ ಸ್ಥಾನಗಳಲ್ಲಿ ಇರುವಂತೆ ಸೂಚಿಸಿದೆ.

ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿಗೆ ಸಹಾಯವಾಣಿ 1077 ಅಥವಾ 9483908000 ಸಂಪರ್ಕಿಸಬಹುದಾಗಿದೆ.

- Advertisement -
spot_img

Latest News

error: Content is protected !!