Saturday, May 4, 2024
Homeಕರಾವಳಿಉಡುಪಿಕೊರೋನಾ ಸೋಂಕು ಪ್ರಕರಣ: ದಕ್ಷಿಣ ಕನ್ನಡ ಎರಡನೇ ಸ್ಥಾನ, ಉಡುಪಿ ಮೂರನೇ ಸ್ಥಾನ

ಕೊರೋನಾ ಸೋಂಕು ಪ್ರಕರಣ: ದಕ್ಷಿಣ ಕನ್ನಡ ಎರಡನೇ ಸ್ಥಾನ, ಉಡುಪಿ ಮೂರನೇ ಸ್ಥಾನ

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಇಂದು ಪತ್ತೆಯಾದ ಕೊರೋನಾ ಸೋಕಿತರ ಪ್ರಕರಣಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಉಡುಪಿ ಜಿಲ್ಲೆ ಮೂರನೇ ಸ್ಥಾನದಲ್ಲಿದೆ. ನಿನ್ನೆ ರಾಜ್ಯದಲ್ಲೇ ಅತೀ ಹೆಚ್ಚು 210 ಸೋಂಕು ಪ್ರಕರಣಗಳು ಕಂಡುಬಂದಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 219 ಪ್ರಕರಣಗಳು ಪತ್ತೆಯಾಗಿವೆ. ಉಡುಪಿ ಜಿಲ್ಲೆಯ 135 ಸೋಂಕಿತರು ಪತ್ತೆಯಾಗಿದ್ದಾರೆ.

ನಿನ್ನೆ ಎರಡನೇ ಸ್ಥಾನದಲ್ಲಿದ್ದ ಬೆಂಗಳೂರು ನಗರ ಇಂದು 290 ಪ್ರಕರಣಗಳ ಮೂಲಕ ಮತ್ತೆ ಮೊದಲನೇ ಸ್ಥಾನದಲ್ಲಿದೆ. ಪಕ್ಕದ ಕೇರಳ ರಾಜ್ಯದಿಂದ ಉಭಯ ಜಿಲ್ಲೆಗಳಿಗೆ ಪ್ರವೇಶಿಸುವ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದ್ದರೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅತೀ ಹೆಚ್ಚು ಪ್ರಕರಣಗಳು ಇಂದು ಪತ್ತೆಯಾಗಿವೆ.

ಇಂದು ರಾಜ್ಯದಲ್ಲಿ ಒಟ್ಟು 1285 ಹೊಸ ಪ್ರಕರಣಗಳು ಪತ್ತೆಯಾಗಿದ್ದು 25 ಜನ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 4 ಕೋವಿಡ್ ಮರಣ ಸಂಭವಿಸಿದ್ದರೆ, ಉಡುಪಿ ಜಿಲ್ಲೆಯಲ್ಲಿ ಯಾವುದೇ ಮರಣ ಪ್ರಕರಣಗಳು ವರದಿಯಾಗಿಲ್ಲ.

- Advertisement -
spot_img

Latest News

error: Content is protected !!