Wednesday, June 24, 2026
Homeತಾಜಾ ಸುದ್ದಿದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವು ಕಡೆ ಒಂದು ವಾರ ಗಾಳಿ ಸಹಿತ ಮಳೆ; ಹವಾಮಾನ...

ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವು ಕಡೆ ಒಂದು ವಾರ ಗಾಳಿ ಸಹಿತ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

- Advertisement -
- Advertisement -

ಬೆಂಗಳೂರು: ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿರುವ ಬೆನ್ನಲ್ಲೇ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಹಲವು ಕಡೆಗಳಲ್ಲಿ ಗಾಳಿ ಸಹಿತ ಒಂದು ವಾರಗಳ ಕಾಲ ಭಾರೀ ಮಳೆಯಾಗಲಿದೆ.

ಮಂಗಳೂರು, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಶಿವಮೊಗ್ಗ, ಯಾದಗಿರಿ, ವಿಜಯಪುರ, ಬೀದರ್‌ ಜಿಲ್ಲೆಗಳಲ್ಲಿ ಮಳೆ ಆರ್ಭಟ ಹೆಚ್ಚಾಗಲಿದ್ದು, ಅಕ್ಟೋಬರ್.‌1ರಿಂದ ಮಳೆ ಆರ್ಭಟ ಮತ್ತಷ್ಟು ಹೆಚ್ಚಾಗಲಿದೆ ಎಂದು ಸೂಚನೆ ನೀಡಿದೆ. ಭಾರೀ ಮಳೆಯಾಗುವ ಪರಿಣಾಮ ಕರಾವಳಿ ಜಿಲ್ಲೆಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಸೆಪ್ಟೆಂಬರ್ 30ರವರೆಗೆ ಚಂಡಮಾರುತದ ಪರಿಣಾಮ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇನ್ನು ಕಳೆದ ಮೂರು ದಿನಗಳಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಜೋರು ಮಳೆಯಾಗುತ್ತಿದೆ. ಮಳೆ ಇನ್ನೂ ಒಂದು ವಾರಗಳ ಕಾಲ ಮುಂದುವರಿಯಲಿರುವ ಹಿನ್ನೆಲೆಯಲ್ಲಿ ಜನತೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

- Advertisement -

Latest News

error: Content is protected !!