Saturday, June 27, 2026
Homeಕರಾವಳಿಮಂಗಳೂರು: ಎಡಪದವು ಗ್ರಾಮ ಪಂಚಾಯತ್ ಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಓ ಭೇಟಿ

ಮಂಗಳೂರು: ಎಡಪದವು ಗ್ರಾಮ ಪಂಚಾಯತ್ ಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಓ ಭೇಟಿ

- Advertisement -
- Advertisement -

ಮಂಗಳೂರು: ಎಡಪದವು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಎಂಆರ್ ಎಫ್ ಘಟಕಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.

ಇದೇ ವೇಳೆ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ ನರೇಗಾ ಕಾಮಗಾರಿಗಳ ಕಡತವನ್ನು ಜಿಲ್ಲಾ ಪಂಚಾಯತ್ ಸಿಇಓ ಪರೀಶೀಲಿಸಿದರು. ಇದರ ಜೊತೆಗೆ ಅಂಗನವಾಡಿಗೆ ಭೇಟಿ ನೀಡಿ ಮಕ್ಕಳಿಗೆ ನೀಡುವ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿಯನ್ನು ಕೂಡಾ ಪಡೆದುಕೊಂಡರು.

ಈ ಸಂಧರ್ಭದಲ್ಲಿ ಎಡಪದವು ಗ್ರಾಮ ಪಂಚಾಯತ್ ಅಧ್ಯಕ್ಷ ಸುಕುಮಾರ್, ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ನರೇಂದ್ರ ಬಾಬು, ಕಿರಿಯ ಅಭಿಯಂತರ ಪ್ರದೀಪ್, ಲೆಕ್ಕ ಸಹಾಯಕ ಇಸ್ಮಾಯಿಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಶ್ರೀಮತಿ ಮಾಲಿನಿ ಮತ್ತು ಸ್ವಚ್ಚ ಭಾರತ್ ಮಿಷನ್ ವಿಭಾಗದ ನವೀನ್ ಉಪಸ್ಥಿತರಿದ್ದರು.

- Advertisement -

Latest News

error: Content is protected !!