Thursday, June 4, 2026
Homeಕರಾವಳಿಉಡುಪಿಉಡುಪಿ: ಉತ್ಸವದ ಸಂದರ್ಭ ಪಲ್ಲಕ್ಕಿ ಮುಟ್ಟಿದ್ದಕ್ಕೆ ದಲಿತ ಬಾಲಕನಿಗೆ ಬಹಿಷ್ಕಾರ: ಧರ್ಮ ಗ್ರಂಥಗಳು ಇದನ್ನು ಒಪ್ಪುವುದಿಲ್ಲ:...

ಉಡುಪಿ: ಉತ್ಸವದ ಸಂದರ್ಭ ಪಲ್ಲಕ್ಕಿ ಮುಟ್ಟಿದ್ದಕ್ಕೆ ದಲಿತ ಬಾಲಕನಿಗೆ ಬಹಿಷ್ಕಾರ: ಧರ್ಮ ಗ್ರಂಥಗಳು ಇದನ್ನು ಒಪ್ಪುವುದಿಲ್ಲ: ಪೇಜಾವರ ಶ್ರೀ

- Advertisement -
- Advertisement -

ಉಡುಪಿ: ಮಾಲೂರಿನಲ್ಲಿ ಉತ್ಸವದ ಸಂದರ್ಭ ಪಲ್ಲಕ್ಕಿ ಮುಟ್ಟಿದ್ದಕ್ಕೆ ದಲಿತ ಬಾಲಕನಿಗೆ ಬಹಿಷ್ಕಾರ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಪೇಜಾವರ ಮಠದ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ ತೀವ್ರ ಖೇದ ವ್ಯಕ್ತಪಡಿಸಿದರು.

ಈ ಘಟನೆಯನ್ನು ಕೇಳಿ ನಮಗೆ ಬಹಳ ಖೇದವಾಗಿದೆ. ಧರ್ಮ ಗ್ರಂಥಗಳು ಇಂತಹ ಬೆಳವಣಿಗೆಯನ್ನು ಒಪ್ಪುವುದಿಲ್ಲ. ಉತ್ಸವ ಇಡೀ ಊರಿಗೆ ಸಂಬಂಧಿಸಿದ ಕಾರ್ಯಕ್ರಮ. ಬಹಿಷ್ಕಾರ ಶಿಕ್ಷೆ ದಂಡವನ್ನು ಯಾವ ಧರ್ಮ ಗ್ರಂಥವೂ ಒಪ್ಪುವುದಿಲ್ಲ. ಹಿಂದೂ ಸಂಘಟನೆಗಳು ಪಿಡುಗಿನ ವಿರುದ್ಧ ಜಾಗೃತಿ ಮೂಡಿಸುತ್ತಿದೆ. ಸರ್ಕಾರ ಕೂಡ ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಸಲಹೆ ನೀಡಿದರು.

- Advertisement -

Latest News

error: Content is protected !!