- Advertisement -
![]()
- Advertisement -
ಪುತ್ತೂರು : ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಯ ದೇವಸ್ಯ ಎಂಬಲ್ಲಿ ಹಳೆಯ ಸೇತುವೆಗೆ ಹಾನಿಯಾಗಿದ್ದು, ಸೇತುವೆಯ ಮೇಲೆ ಎಲ್ಲಾ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆಯ ಪುತ್ತೂರು ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.
ಹೊಸ ಸೇತುವೆಯ ಸಂಪರ್ಕ ರಸ್ತೆಯ ಕಾಮಗಾರಿ ಪ್ರಗತಿಯಲ್ಲಿದ್ದು, ಮೂರು ದಿನಗಳ ಒಳಗಾಗಿ ಸಂಚಾರವನ್ನು ಮರುಸ್ಥಾಪಿಸಲು ಕ್ರಮವಹಿಸಲಾಗಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -


