Thursday, June 25, 2026
Homeಕರಾವಳಿಮಂಗಳೂರುಬಂಟ್ವಾಳ: ಭಾರಿ ಗಾಳಿಗೆ ಮನೆಗಳ ಸಹಿತ ಕೃಷಿ ಭೂಮಿಗಳಿಗೆ ಹಾನಿ...!

ಬಂಟ್ವಾಳ: ಭಾರಿ ಗಾಳಿಗೆ ಮನೆಗಳ ಸಹಿತ ಕೃಷಿ ಭೂಮಿಗಳಿಗೆ ಹಾನಿ…!

- Advertisement -
- Advertisement -

ಬಂಟ್ವಾಳ: ಶನಿವಾರ ಸಂಜೆ ಬಂಟ್ವಾಳ ತಾಲೂಕಿನ ಕೆಲ ಗ್ರಾಮಗಳಲ್ಲಿ ಬಿರುಗಾಳಿ, ಮಳೆಗೆ ಒಟ್ಟು 86 ಮನೆಗಳ ಸಹಿತ ಕೃಷಿ ಭೂಮಿಗಳಿಗೆ ಹಾನಿಯಾಗಿದೆ. ಹಾನಿಗೊಳಗಾದ ಪ್ರದೇಶಗಳಿಗೆ ಭಾನುವಾರ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಒಟ್ಟು 77 ಮನೆಗಳಿಗೆ ಭಾಗಶಃ ಹಾನಿಯಾಗಿದ್ದರೆ, 9 ಮನೆಗಳಿಗೆ ತೀವ್ರ ಹಾನಿಯಾಗಿದೆ. ಬಡಗ ಹಾಗೂ ತೆಂಕ ಕಜೆಕಾರು ಪ್ರದೇಶಗಳಲ್ಲಿ 65 ಮನೆಗಳಿಗೆ ಭಾಗಶಃ ಹಾನಿ, 8 ಮನೆಗಳಿಗೆ ತೀವ ಹಾನಿಯಾದರೆ, ಉಳಿಯಲ್ಲಿ 1 ಮನೆಗೆ ತೀವ ಹಾನಿ, 7 ಮನೆಗಳಿಗೆ ಭಾಗಶಃ ಹಾನಿಯಾಗಿದೆ.

ಕಾವಳಮುಡೂರು ಗ್ರಾಮದಲ್ಲಿ 5 ಮನೆಗಳಿಗೆ ಹಾನಿಯಾಗಿದೆ ಎಂದು ಪ್ರಭಾರ ಕಂದಾಯ ನಿರೀಕ್ಷಕ ಕುಮಾರ್‌ ಟಿ.ಸಿ. ತಿಳಿಸಿದ್ದಾರೆ. ತಾಲೂಕಿನ ತಂಕಕಜೆಕಾರು, ಬಡಗಕಜೆಕಾರು, ಉಳಿ, ಕಾವಳಮುಡೂರು ಸಹಿತ ಸುತ್ತಮುತ್ತಲಿನ ಕೆಲ ಗ್ರಾಮಗಳಲ್ಲಿ ಬಿರುಗಾಳಿ ಆರ್ಭಟ ತೋರಿತು.

ನೂರಾರು ಅಡಕೆ, ತಂಗು, ಬಾಳೆ, ರಬ್ಬರ್ ಗಿಡ, ಮರಗಳು ಧರಾಶಾಹಿಯಾಗಿವೆ. ನೆಲ್ಲಿಗುಡ್ಡೆ, ಅಗರ್ತ್ಯಾರು, ಮುಚ್ಚಿರೋಡಿ ಪ್ರದೇಶಗಳಲ್ಲಿ ಕೃಷಿ ಹಾನಿಗಳು ಸಂಭವಿಸಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!