Saturday, June 6, 2026
Homeಕರಾವಳಿಉಡುಪಿಮಕ್ಕಳ ಹಕ್ಕುಗಳ ಹೋರಾಟಗಾರ ಬಿ.ದಾಮೋದರ ಆಚಾರ್ಯ ಇನ್ನು ನೆನಪು ಮಾತ್ರ!..

ಮಕ್ಕಳ ಹಕ್ಕುಗಳ ಹೋರಾಟಗಾರ ಬಿ.ದಾಮೋದರ ಆಚಾರ್ಯ ಇನ್ನು ನೆನಪು ಮಾತ್ರ!..

- Advertisement -
- Advertisement -

ಉಡುಪಿ: ಸಿಡಬ್ಲ್ಯುಸಿ ನಮ್ಮ ಭೂಮಿ ಸಂಸ್ಥೆಯ ಸಂಸ್ಥಾಪಕ ಹಾಗು ಮಕ್ಕಳ ಹಕ್ಕುಗಳ ಹೋರಾಟಗಾರ ಬಿ.ದಾಮೋದರ ಆಚಾರ್ಯ (63) ಅವರು ಬಹುಕಾಲದ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ಬಿ.ದಾಮೋದರ ಆಚಾರ್ಯ ಕುಂದಾಪುರದ ಕನ್ಯಾನದಲ್ಲಿ ‘ನಮ್ಮ ಭೂಮಿ’ ಸಂಸ್ಥೆ ಹುಟ್ಟುಹಾಕಿ ಬಡ ಹಾಗೂ ವಲಸೆ ಕಾರ್ಮಿಕರ ಮಕ್ಕಳಿಗೆ ಸ್ವಉದ್ಯೋಗ ತರಬೇತಿ ನೀಡುತ್ತಿದ್ದರು. ಅವರು ಬೆಂಗಳೂರಿನಲ್ಲಿ ‘ಗ್ರಾಮಾಶ್ರಮ’ ಸಂಸ್ಥೆ ಆರಂಭಿಸಿ ವಲಸೆ ಕಾರ್ಮಿಕರಾಗಿ ಹೋಟೆಲ್‌ಗಳಲ್ಲಿ ದುಡಿಯುತ್ತಿದ್ದ ಮಕ್ಕಳ ಹಕ್ಕುಗಳ ರಕ್ಷಣೆಗೆ ಮುಂದಾಗಿದ್ದರು.ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದು ಹುಟ್ಟೂರು ಕುಂದಾಪುರ ತಾಲ್ಲೂಕಿನ ಬಸ್ರೂರಿನ ಮೂಡುಕೆರೆಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

- Advertisement -

Latest News

error: Content is protected !!