Saturday, May 4, 2024
Homeಕರಾವಳಿಉಡುಪಿಕುಂದಾಪುರ: ಖಾಸಗೀ ಶಾಲೆಯಲ್ಲಿ ಆಜಾನ್‌ಗೆ ವಿದ್ಯಾರ್ಥಿಗಳಿಂದ ನೃತ್ಯ: ಹಿಂದೂ ಸಂಘಟನೆಗಳಿಂದ ಆಕ್ರೋಶ ವ್ಯಕ್ತ

ಕುಂದಾಪುರ: ಖಾಸಗೀ ಶಾಲೆಯಲ್ಲಿ ಆಜಾನ್‌ಗೆ ವಿದ್ಯಾರ್ಥಿಗಳಿಂದ ನೃತ್ಯ: ಹಿಂದೂ ಸಂಘಟನೆಗಳಿಂದ ಆಕ್ರೋಶ ವ್ಯಕ್ತ

spot_img
- Advertisement -
- Advertisement -

ಕುಂದಾಪುರ: ಶಂಕರನಾರಾಯಣದ ಮದರ್ ಥೆರೆಸಾ ಮೆಮೋರಿಯಲ್ ಶಾಲೆಯ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಆಝಾನ್ ಗೆ ನೃತ್ಯ ಮಾಡಿದ್ದಕ್ಕೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.

ಹಿಂದೂ ಸಂಘಟನೆಗಳಿಂದ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಆಡಳಿತ ಮಂಡಳಿ ಕ್ಷಮೆ ಕೋರಿದೆ. ಪ್ರೌಢ ಶಾಲೆಯ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸ್ವಾಗತ ನೃತ್ಯ ಮಾಡಿದ್ದಾರೆ. ಸ್ವಾಗತ ನೃತ್ಯದಲ್ಲಿ ಹಿಂದೂ, ಕ್ರೈಸ್ತ, ಇಸ್ಲಾಂ ಮತದ ಹಾಡುಗಳಿಗೆ ವಿದ್ಯಾರ್ಥಿನಿಯರು ನೃತ್ಯ ಮಾಡಿದ್ದಾರೆ. ಅಲ್ಲಾಹು ಅಕ್ಬರ್‌ಗೆ (ಆಜಾನ್) ವಿದ್ಯಾರ್ಥಿಗಳು ನೃತ್ಯ ಮಾಡಿದ್ದಕ್ಕೆ ವೇದಿಕೆಯಲ್ಲಿದ್ದ ಸ್ಥಳೀಯ ಬಿಜೆಪಿ ಮುಖಂಡ ಉಮೇಶ್ ಶೆಟ್ಟಿ ಕಲ್ಗದ್ದೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆಝಾನ್ ಗೆ ವಿದ್ಯಾರ್ಥಿನಿಯರು ನೃತ್ಯ ಮಾಡಿದ ದೃಶ್ಯ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ. ಹಿಂದೂ ಸಂಘಟನೆಗಳು ಪ್ರತಿಭಟಿಸುವ ಎಚ್ಚರಿಕೆ ನೀಡಿದ ಬಳಿಕ ಶಾಲಾ ಆಡಳಿತ ಮಂಡಳಿ ಕ್ಷಮೆ ಯಾಚಿಸಿದೆ.

- Advertisement -
spot_img

Latest News

error: Content is protected !!