Saturday, May 18, 2024
Homeಕರಾವಳಿಅಪಾಯಕ್ಕೆ ಆಹ್ವಾನ ನೀಡುತ್ತಿದೆ ಉಪ್ಪಿನಂಗಡಿ-ಗುರುವಾಯನಕೆರೆ ರಸ್ತೆಯಲ್ಲಿರುವ ಹೊಂಡಗಳು: ಸಮಸ್ಯೆ ಬಗೆಹರಿಸುವಂತೆ ಲೋಕೋಪಯೋಗಿ ಇಲಾಖೆಗೆ ಪತ್ರ

ಅಪಾಯಕ್ಕೆ ಆಹ್ವಾನ ನೀಡುತ್ತಿದೆ ಉಪ್ಪಿನಂಗಡಿ-ಗುರುವಾಯನಕೆರೆ ರಸ್ತೆಯಲ್ಲಿರುವ ಹೊಂಡಗಳು: ಸಮಸ್ಯೆ ಬಗೆಹರಿಸುವಂತೆ ಲೋಕೋಪಯೋಗಿ ಇಲಾಖೆಗೆ ಪತ್ರ

spot_img
- Advertisement -
- Advertisement -

ಬೆಳ್ತಂಗಡಿ: ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆಯ ಬದಿಗಳಲ್ಲಿ ಮುಗರೆಡ್ಕ ಏತ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಪೈಪ್ ಲೈನ್ ಗಳನ್ನು ಹಾಕಲಾಗುತ್ತಿದೆ.ಇದಕ್ಕಾಗಿ ಹೊಂಡಗಳನ್ನು ತೊಡಲಾಗಿದ್ದು, ಹೊಂಡಗಳು ರಸ್ತೆಗೆ ಅಂಟಿಕೊಂಡಂತೆ ಇದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿದೆ.

ಸದ್ಯ ಮಳೆಗಾಲವಾದ್ದರಿಂದ ಪುಟ್ಟ ಮಕ್ಕಳು, ಸಾರ್ವಜನಿಕರು ರಸ್ತೆ ಬದಿ ನಡೆದುಕೊಂಡು ಹೋಗೋದಕ್ಕೆ ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ.ಈಗಾಗಲೇ ಈ ಬಗ್ಗೆ ಬೃಹತ್ ನೀರಾವರಿ ಯೋಜನೆಯ ಇಂಜಿನಿಯರ್ ಗಮನಕ್ಕೆ ತಂದ್ರೂ ಯಾವುದೇ ಪ್ರಯೋಜನವಾಗಿಲ್ಲ.

ಇನ್ನು ರಸ್ತೆಯಿಂದ 3.50 ಮೀಟರ್ ಅಂತರ ಬಿಟ್ಟು ಪೈಪ್ ಲೈನ್ ನಿರ್ಮಿಸಬೇಕು ಎಂಬ ನಿಯಮವಿದ್ದರೂ ಕೂಡ ಅದನ್ನು ಇಲ್ಲಿ ಗಾಳಿಗೆ ತೂರಲಾಗಿದೆ.ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು ಎಂದು ಬೆಳ್ತಂಗಡಿಯ ನ್ಯಾಯವಾದಿ ಮನೋಹರ್ ಕುಮಾರ್ ಅವರು ಲೋಕೋಪಯೋಗಿ ಕಾರ್ಯನಿರ್ವಾಹಕ ಇಂಜಿನಿಯರ್ ಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

- Advertisement -
spot_img

Latest News

error: Content is protected !!