Saturday, June 29, 2024
Homeತಾಜಾ ಸುದ್ದಿರೇಣುಕಾಸ್ವಾಮಿ ಕೊಲೆ ಪ್ರಕರಣ; ಜಾಮೀನಿಗೆ ಅರ್ಜಿ ಸಲ್ಲಿಸಲು ದರ್ಶನ್ ಹಾಗೂ ಪವಿತ್ರ ಗೌಡ ಸಿದ್ಧತೆ

ರೇಣುಕಾಸ್ವಾಮಿ ಕೊಲೆ ಪ್ರಕರಣ; ಜಾಮೀನಿಗೆ ಅರ್ಜಿ ಸಲ್ಲಿಸಲು ದರ್ಶನ್ ಹಾಗೂ ಪವಿತ್ರ ಗೌಡ ಸಿದ್ಧತೆ

spot_img
- Advertisement -
- Advertisement -

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಒಟ್ಟು 13 ಜನ ಆರೋಪಿಗಳು ಪರಪ್ಪನ ಅಗ್ರಹಾರ ಸೇರಿದ್ದಾರೆ. ಆರೋಪಿಗಳಿಗೆ ಜುಲೈ 4 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದ್ದಾರೆ.

ಜೈಲು ಸೇರುತ್ತಿದ್ದಂತೆ ನಟ ದರ್ಶನ್, ಪವಿತ್ರ ಗೌಡ ಮೌನಕ್ಕೆ ಶರಣಾಗಿದ್ದಾರೆ ಎನ್ನಲಾಗಿದೆ. ಅಲ್ಲದೇ ಜೈಲಿನ ಊಟ, ವಾತಾವರಣಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದೇ ಪರದಾಡುತ್ತಿದ್ದಾರೆ ಎನ್ನಲಾಗಿದೆ. ಹೀಗಿರುವಾಗಲೇ ಮತ್ತೊಂದು ಕಡೆ ನಟ ದರ್ಶನ್‌, ಪವಿತ್ರಾಗೌಡ ಸೇರಿದಂತೆ ಇತರೆ ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ  ವಕೀಲರ ಜೊತೆಗೆ ಚರ್ಚೆ ನಡೆಸಿದ್ದು, ಇಂದು ಪ್ರಕರಣದಲ್ಲಿ ಇದುವರೆಗಿನ ವರದಿ ಕುರಿತು ವಿಚಾರಣಾ ಕೋರ್ಟ್‌ ನಿಂದ ಅಧಿಕೃತ ದಾಖಲೆ ಪಡೆದು ಕೋರ್ಟ್‌ ಗೆ ಜಾಮೀನು ಅರ್ಜಿಗಳು ಸಲ್ಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

- Advertisement -
spot_img

Latest News

error: Content is protected !!