- Advertisement -
- Advertisement -
ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಬೆಂಗಳೂರಿನ 57ನೇ ಸಿ ಸಿ ಹೆಚ್ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿತ್ತು. ಇದರ ಬೆನ್ನಲ್ಲೇ ಇದೀಗ ನಟ ದರ್ಶನ್ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಹೌದು.. ನಿನ್ನೆ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ದರ್ಶನ್ ಪರ ವಕೀಲರು ಹಾಗೂ ಪೊಲೀಸರ ಎಸ್ ಪಿ ಪಿ ಪರ ವಕೀಲರ ವಾದ ಮತ್ತು ಪ್ರತಿ ವಾದಗಳನ್ನು ಆಲಿಸಿದ ಬಳಿಕ ನ್ಯಾಯಾಲಯವು ನಟ ದರ್ಶನ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತು. ಈ ಹಿನ್ನೆಲೆಯಲ್ಲಿ ನಿನ್ನೇನೆ ನಡೆದ ದರ್ಶನ್ ಪರ ವಕೀಲರು ಹೈಕೋರ್ಟಿಗೆ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದರು ಎಂದು ಹೇಳಲಾಗಿತ್ತು. ಅದರಂತೆ ಇಂದು ನಟ ದರ್ಶನ್ ಪರ ವಕೀಲ ಸುನಿಲ್ ಅವರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.
ಅಲ್ಲದೇ ನಟ ದರ್ಶನ್ ಅವರು ಅನಾರೋಗ್ಯದ ಕಾರಣ ನೀಡಿ ಜಾಮೀನು ಪಡೆಯಲು ಯತ್ನಿಸುತ್ತಿದ್ದಾರೆ ಎನ್ನಲಾಗಿದ್ದು, ಏನಾಗುತ್ತೆ ಅನ್ನೋದನ್ನು ಕಾದು ನೋಡ್ಬೇಕು.
- Advertisement -