Friday, October 4, 2024
HomeUncategorizedಕೊನೆಗೂ ಮಾಧ್ಯಮಗಳ ಕ್ಷಮೆಯಾಚಿಸಿದ ಡಿ ಬಾಸ್ ದರ್ಶನ್

ಕೊನೆಗೂ ಮಾಧ್ಯಮಗಳ ಕ್ಷಮೆಯಾಚಿಸಿದ ಡಿ ಬಾಸ್ ದರ್ಶನ್

spot_img
- Advertisement -
- Advertisement -

ಬೆಂಗಳೂರು:ಮಾಧ್ಯಮ ಹಾಗೂ ಡಿ ಬಾಸ್ ದರ್ಶನ್ ನಡುವಿನ ವಾರ್ ಗೆ ಸ್ವತಃ ಛಾಲೆಂಜಿಂಗ್ ಸ್ಟಾರೇ ಪೂರ್ಣ ವಿರಾಮವಿಟ್ಟಿದ್ದಾರೆ.ಆ ಮೂಲಕ ಮಾಧ್ಯಮ ಹಾಗೂ ತಮ್ಮ ನಡುವಿನ ಕಂದಕವನ್ನು ಮುಚ್ಚುವ ಕೆಲಸಕ್ಕೆ ಮುಂದಾಗಿದ್ದಾರೆ.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಡಿ ಬಾಸ್ ದರ್ಶನ್ ಸಮಸ್ತ ಕರ್ನಾಟಕ ಜನತೆಗೆ ನನ್ನ ಸೆಲೆಬ್ರಿಟಿಗಳಿಗೆ ಹಾಗೂ ಹಿರಿಯ ಪತ್ರಕರ್ತರಿಗೆ, ಮಾಧ್ಯಮ ಮಿತ್ರರಿಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು.ಕಳೆದ ಸುಮಾರು ಎರಡು ವರ್ಷಗಳಿಂದ ನನ್ನ ಹಾಗೂ ಕನ್ನಡ ಮಾಧ್ಯಮ ಮಿತ್ರರ ನಡುವೆ ಒಂದು ಕಂದಕ ಉಂಟಾಗಿತ್ತು. ಈ ವರಮಹಾಲಕ್ಷ್ಮಿ ಹಬ್ಬದ ಮುನ್ನಾದಿನ, ಮಿತ್ರ ರಾಕ್ ಲೈನ್ ವೆಂಕಟಕೇಶ್ ನೇತೃತ್ವದಲ್ಲಿ ನನ್ನ ಹಾಗೂ ಕನ್ನಡದ ಪ್ರಮುಖ ಮಾಧ್ಯಮಗಳ ಸಂಪಾದಕರ ನಡುವೆ ಮಾತುಕತೆ ನಡೆದು ಇಡೀ ಪ್ರಕರಣ ಸುಖಾಂತ್ಯಗೊಂಡಿದೆ.

ಕೆಲ ವರ್ಷಗಳ ಹಿಂದಿನ ನನ್ನ ಆಡಿಯೋ ಒಂದು ದುರುದ್ದೇಶಪೂರ್ವಕವಾಗಿ ವೈರಲ್ ಆಗಿ ಇಡೀ ವಿವಾದಕ್ಕೆ ಕಾರಣವಾಗಿತ್ತು. ಅದು ಯಾವುದೋ ವಿಷಮ ಘಳಿಗೆಯಲ್ಲಿ ಒಬ್ಬ ವ್ಯಕ್ತಿಯ ಮಾತಿಗೆ ಪ್ರತಿಕ್ರಿಯೆಯಾಗಿತ್ತು. ಅದು ಮಾಧ್ಯಮದ ಇತರ ವ್ಯಕ್ತಿಗಳನ್ನು ಕುರಿತು ಆಡಿದ ಮಾತಾಗಿರಲಿಲ್ಲ. ಆ ವ್ಯಕ್ತಿ ಯಾವ ದುರುದ್ದೇಶದಿಂದ ಮಾಡಿದರು ಗೊತ್ತಿಲ್ಲ ಆದರೂ ಆ ವ್ಯಕ್ತಿಗೆ ಒಳ್ಳೆಯದಾಗಲಿ ಮುಂದೆ ಆ ವ್ಯಕ್ತಿ ಈರೀತಿಯ ದುರುದ್ದೇಶವನ್ನು ಮರುಕಳಿಸದಿರಲಿ, ಆದರೂ ಅಂತಹ ಮಾತಿನಿಂದ ನೋವುಂಟಾಗಿದ್ದರೆ ಮಾಧ್ಯಮದ ಹಿರಿಯರಿಗೆ ಕ್ಷಮೆ ಕೋರುವುದರಲ್ಲಿ ತಪ್ಪಿಲ್ಲ. ಈ ಅಯಾಚಿತ ಘಟನೆಗೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ ರಂಗದ ಕ್ಷಮೆ ಇರಲಿ. ಒಂದು ಉತ್ತಮವಾದ ಸಮಾಜಕ್ಕೆ ಒಳ್ಳೆಯ ಮಾಧ್ಯಮಗಳ ಅಗತ್ಯವಿದೆ. ನನಗೂ ಮಾಧ್ಯಮಗಳ ಬಗ್ಗೆ ಗೌರವವಿದೆ. ಚಿತ್ರರಂಗದ ನನ್ನ ಬೆಳವಣಿಗೆಯಲ್ಲಿ ಮಾಧ್ಯಮಗಳು ಪ್ರೀತಿಯಿಂದ ನೀಡಿದ ಪ್ರಚಾರದ ಪಾಲೂ ಸಾಕಷ್ಟಿದೆ. ಈ ಹಿಂದೆ ಆಗಿರುವ ಕಹಿ ಘಟನೆಯನ್ನು ಮರೆತು ನಾವೆಲ್ಲ ಮುಂದೆ ಸಾಗೋಣ. ಕನ್ನಡ, ಕನ್ನಡಿಗರು, ಕನ್ನಡ ನೆಲ ಜಲ, ಕನ್ನಡ ಚಿತ್ರರಂಗದ ಪ್ರಗತಿಗೆ ಜೊತೆಯಾಗಿ ಕೆಲಸ ಮಾಡೋಣ. ಪ್ರೀತಿಯಿರಲಿ, ನನ್ನ ಪ್ರೀತಿಯ ಸೆಲೆಬ್ರಿಟಿಗಳು ನನ್ನ ಭಾವನೆಯನ್ನು ಗೌರವಿಸುತ್ತಾರೆ ಎಂದು ಭಾವಿಸುತ್ತೇನೆ.ಪ್ರೀತಿಯಂದ ದರ್ಶನ್ ತೂಗೂದೀಪ ಎಂದು ಬರೆದುಕೊಂಡಿದ್ದಾರೆ.

- Advertisement -
spot_img

Latest News

error: Content is protected !!