Friday, June 5, 2026
Homeತಾಜಾ ಸುದ್ದಿಬೆಂಗಳೂರು; ದರ್ಶನ್ ಫಾರ್ಮ್ ಹೌಸ್ ನಲ್ಲಿ ಮ್ಯಾನೇಜರ್ ಆತ್ಮಹತ್ಯೆ

ಬೆಂಗಳೂರು; ದರ್ಶನ್ ಫಾರ್ಮ್ ಹೌಸ್ ನಲ್ಲಿ ಮ್ಯಾನೇಜರ್ ಆತ್ಮಹತ್ಯೆ

- Advertisement -
- Advertisement -

ಬೆಂಗಳೂರು; ದರ್ಶನ್ ಫಾರ್ಮ್ ಹೌಸ್ ನಲ್ಲಿ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಶ್ರೀಧರ್(35) ಸೂಸೈಡ್ ಮಾಡಿಕೊಂಡ ಮ್ಯಾನೇಜರ್.

 ಏಪ್ರಿಲ್ 17 ರಂದು ಶ್ರೀಧರ್ ಆತ್ಮಹತ್ಯೆಗೆ ಶರಣಾಗಿದ್ದರು. ತಮ್ಮ ಮನೆ ಆನೇಕಲ್ ತಾಲ್ಲೂಕಿನ ಬಗ್ಗನದೊಡ್ಡಿಯಲ್ಲಿರುವ ದರ್ಶನ್ ಗೆ ಸೇರಿದ ದುರ್ಗ ಫಾರ್ಮ್ ಹೌಸ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು.

ಶ್ರೀಧರ್ ಮೃತ ದೇಹ ಕಂಡು ಸ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದ.ಫಾರ್ಮ್ ಹೌಸ್ ಪಕ್ಕದಲ್ಲಿ ರಕ್ತಕಾರಿ ಸತ್ತಿದ್ದರು ಶ್ರೀಧರ್.ಒಂದು ವರ್ಷಗಳ ಕಾಲ ಮ್ಯಾನೇಜರ್ ಆಗಿ ಶ್ರೀಧರ್ ಕೆಲಸ ಮಾಡಿದ್ದರು. ಕಲ್ಲು ಬಂಡೆ ಮೇಲೇ ಶ್ರೀಧರ್ ಮೃತದೇಹ ಪತ್ತೆಯಾಗಿತ್ತು.ಸುಮಾರು 2 ಎಕರೆ 36 ಗುಂಟೆ ಪ್ರದೇಶದಲ್ಲಿದೆ ಈ ಫಾರ್ಮ್ ಹೌಸ್.

ಇನ್ನು ನನ್ನ ಸಾವಿಗೆ ನಾನೇ ಕಾರಣ. ಒಂಟಿತನ ಕಾಡುತ್ತಿದೆ ಎಂದು ಡೆತ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಆನೇಕಲ್ ಪೊಲೀಸ್ ಠಾಣೆಯಲ್ಲಿ UDR ಪ್ರಕರಣ ದಾಖಲಾಗಿತ್ತು.

- Advertisement -

Latest News

error: Content is protected !!