- Advertisement -
![]()
- Advertisement -
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಛಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲು ಸೇರಿ ಈಗಾಗಲೇ ಒಂದು ತಿಂಗಳು ಕಳೆದಿದೆ. ಜೈಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದೇ ನಟ ದರ್ಶನ್ ಪರದಾಡುತ್ತಿದ್ದಾರೆ. ಈಗಾಗಲೇ ಜೈಲಿನ ಊಟ ಸೇವಿಸಿ ಅವರಿಗೆ ಬೇಧಿ ಕಾಣಿಸಿಕೊಂಡಿತ್ತು ಎನ್ನಲಾಗಿತ್ತು. ಅಲ್ಲದೇ ಮನೆಯೂಟ ಈಗಾಗಲೇ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಹೀಗರುವಾಗಲೇ ದರ್ಶನ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಅವರಿಗೆ ಜ್ವರ ಕಾಣಿಸಿಕೊಂಡಿದೆ ಎನ್ನಲಾಗಿದೆ. ಹಾಗಾಗಿ ಅವರನ್ನು ಜೈಲಿನ ಆಸ್ಪತ್ರೆಗೆ ದಾಖಲಿಸಿ ಅಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ. ಅಲ್ಲದೇ ಚಿಕಿತ್ಸೆಯ ಬಳಿಕ ದರ್ಶನ್ ಅವರು ಚೇತರಿಸಿಕೊಂಡಿದ್ದಾರೆ ಎನ್ನಲಾಗಿದೆ.
- Advertisement -


