Thursday, June 4, 2026
Homeತಾಜಾ ಸುದ್ದಿಬೆಂಗಳೂರು; ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಫೋಟೋ ವೈರಲ್

ಬೆಂಗಳೂರು; ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಫೋಟೋ ವೈರಲ್

- Advertisement -
- Advertisement -

ಬೆಂಗಳೂರು; ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಫೋಟೋ ವೈರಲ್ ಆಗಿದೆ. ಈ ಮೂಲಕ ಜೈಲಿನಲ್ಲಿ ದರ್ಶನ್ ಹೇಗಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ಪರಪ್ಪನ ಅಗ್ರಹಾರ ಜೈಲಿನ ಸ್ಪೆಷಲ್ ಬ್ಯಾರಕ್ ನ ಹೊರಗಡೆ ನಟ ದರ್ಶನ್, ವಿಲ್ಸನ್ ಗಾರ್ಡನ್ ನಾಗ ಹಾಗೂ ದರ್ಶನ್ ಅವರ ಮ್ಯಾನೇಜರ್ ನಾಗರಾಜ್ ಸೇರಿದಂತೆ ಮತ್ತೊಬ್ಬ ವ್ಯಕ್ತಿಯ ಜೊತೆ ದರ್ಶನ್ ಅವರು ಚೇರ್ ಮೇಲೆ ಕುಳಿತುಕೊಂಡು ಒಂದು ಕೈಯಲ್ಲಿ ಕಾಫಿ ಇನ್ನೊಂದು ಕೈಯಲ್ಲಿ ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್ ಆಗಿದೆ.

ವಿಚಾರಣಾಧೀನ ಕೈದಿ ವೇಲು ಎಂಬವರು  ತೆಗೆದಿರುವ ಫೋಟೋವನ್ನು ತಮ್ಮ ಹೆಂಡತಿ ಕಳಿಸಿದ್ದಾರೆ. ಈ ಮೂಲಕ ದರ್ಶನ್ ಅವರು ಜೈಲಿನಲ್ಲಿರುವ ಫೋಟೋ ಸದ್ಯ ಎಲ್ಲೆಡೆ ವೈರಲ್ ಆಗುತ್ತಿದೆ.

- Advertisement -

Latest News

error: Content is protected !!