Friday, April 18, 2025
Homeಮನರಂಜನೆತನ್ನ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದ ಹೇಳಿದ ಡಿ ಬಾಸ್ ದರ್ಶನ್

ತನ್ನ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದ ಹೇಳಿದ ಡಿ ಬಾಸ್ ದರ್ಶನ್

spot_img
- Advertisement -
- Advertisement -

ಬೆಂಗಳೂರು; ಡಿ ಬಾಸ್ ದರ್ಶನ್ ಅವರು ಫೆಬ್ರವರಿ 17 ರಂದು ತಮ್ಮ 48ನೇ ವರ್ಷದ ಹಬ್ಬವನ್ನು ತಮ್ಮ ಕೆಲವೇ ಕೆಲವು ಆಪ್ತರೊಂದಿಗೆ ಆಚರಿಸಿಕೊಂಡಿದ್ದಾರೆ. ಇನ್ನು ಬರ್ತಡೇಗೆ ಮುನ್ನವೇ ವೀಡಿಯೋ ಮೂಲಕ ಅಭಿಮಾನಿಗಳಿಗೆ ವೀಡಿಯೋ ಮೂಲಕ ಧನ್ಯವಾದ ಹೇಳಿದ್ದರು. ಯಾರು ನನ್ನನ್ನು ಹುಡುಕಿಕೊಂಡು ಮನೆ ಬಳಿ ಬರಬೇಡಿ ಎಂದಿದ್ದರು. ಇದೀಗ ಬರ್ತಡೇ ಬಳಿಕ ಅಭಿಮಾನಿಗಳಿಗೆ ಸೋಷಿಯಲ್ ಮಾಡಿಯಾದಲ್ಲಿ ಪೋಸ್ಟ್ ಒಂದನ್ನು ಹಾಕಿ ಧನ್ಯವಾದ ಹೇಳಿದ್ದಾರೆ.

ದರ್ಶನ್ ಅವರ ಪೋಸ್ಟ್ ಈ ರೀತಿಯಾಗಿದೆ…

ಪ್ರೀತಿಯ ಸೆಲೆಬ್ರಿಟಿಸ್ ಗಳೇ,

ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ.

ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್ಞನಾಗಿದ್ದೇನೆ. ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹದ್ದು. ನಿಮ್ಮ ಈ ಕೆಲಸಗಳು ಅನೇಕರಿಗೆ ದಾರಿದೀಪವಾಗಲಿ.

ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು ಎಂದರೆ ಅತಿಶಯೋಕ್ತಿಯಲ್ಲ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲಿಯೂ ಇದೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ .ನಿಮ್ಮ ದಾಸ ದರ್ಶನ್ ಎಂದು ಡಿ ಬಾಸ್ ಬರೆದುಕೊಂಡಿದ್ದಾರೆ.

- Advertisement -
spot_img

Latest News

error: Content is protected !!