Friday, June 5, 2026
Homeತಾಜಾ ಸುದ್ದಿಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾದ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಹಾಗೂ ಸಹೋದರ ದಿನಕರ್‌

ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾದ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಹಾಗೂ ಸಹೋದರ ದಿನಕರ್‌

- Advertisement -
- Advertisement -

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಬಿಡುಗಡೆ ಮಾಡಿಸಲು ಅವರ ಪತ್ನಿ ಪತ್ನಿ ವಿಜಯಲಕ್ಷ್ಮೀ ಹಾಗೂ ಸಹೋದರ ದಿನಕರ್‌ ತೂಗುದೀಪ ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಲೇ ಇದ್ದಾರೆ.

ಇಂದು ನಟ ದರ್ಶನ್‌ ಕುರಿತು ಚರ್ಚೆ ನಡೆಸಲು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ನಿವಾಸಕ್ಕೆ ದರ್ಶನ್‌ ಅವರ ಪತ್ನಿ ಹಾಗೂ ಸಹೋದರ ಭೇಟಿ ನೀಡಿದ್ದಾರೆ.ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ನಿವಾಸಕ್ಕೆ ಆಗಮಿಸಿದ ವಿಜಯಲಕ್ಷ್ಮೀ ಹಾಗೂ ದಿನಕರ್‌ ತೂಗದೀಪ ಅವರು ದರ್ಶನ್‌ ಪ್ರಕರಣದ ಕುರಿತು ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.

ನಿನ್ನೆ ರಾಮನಗರದಲ್ಲಿ ನಡೆದ ಚಾಮುಂಡೇಶ್ವರಿ ಕರಗ ಮಹೋತ್ಸವದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಭಾಗಿಯಾಗಿದ್ದ ವೇಳೆ  ದರ್ಶನ್ ಅಭಿಮಾನಿಗಳು ಡಿಬಾಸ್ ಡಿ ಬಾಸ್ ಎಂದು ಘೋಷಣೆ ಕೂಗಿದ್ದಾರು. ಆಗ ನಟ ದರ್ಶನ್ ವಿಚಾರ ಪ್ರಸ್ತಾಪಿಸಿದ ಡಿ.ಕೆ.ಶಿವಕುಮಾರ್ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಯನ್ನು ನಾಳೆ ಭೇಟಿ ಮಾಡಿ ಚರ್ಚೆ ಮಾಡುವುದಾಗಿ ತಿಳಿಸಿದ್ದರು. ಅಲ್ಲದೇ ಪ್ರಕರಣದಲ್ಲಿ ಏನಾದರೂ ಅನ್ಯಾಯ ಆಗಿದ್ದರೆ ಸರಿಪಡಿಸಲು ಪ್ರಯತ್ನ ಮಾಡುತ್ತೇನೆ ಆದರೆ, ನಾವು ಕಾನೂನಿಗೆ ಗೌರವ ಕೊಡಬೇಕು. ನಾವೆಲ್ಲ ದೇಶದ ಹಾಗೂ ನೆಲದ ಕಾನೂನು ಪಾಲಿಸಬೇಕು. ಅನ್ಯಾಯ ಆಗಿದ್ದವರಿಗೆ ನಾವೆಲ್ಲ ಸೇರಿ ನ್ಯಾಯ ಒದಗಿಸುವ ಕೆಲಸ ಮಾಡೋಣ. ನೊಂದ ಎಲ್ಲರಿಗೂ ತಾಯಿ ಚಾಮುಂಡೇಶ್ವರಿ ಅನುಗ್ರಹ ನೀಡಲಿ ಎಂದಿದ್ದರು. ಅದರ ಬೆನ್ನಲ್ಲೇ ಇದು ಡಿಸಿಎಂ ಅವರನ್ನು ದರ್ಶನ್ ಪತ್ನಿ ಹಾಗೂ ಸಹೋದರ ಭೇಟಿಯಾಗಿದ್ದಾರೆ.

- Advertisement -

Latest News

error: Content is protected !!