ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಲೆ ಪ್ರಕರಣದ ಎ 2 ಆರೋಪಿ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ದರ್ಶನ್ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿರುವ ಅವರು ಈ ರೀತಿ ಬರೆದಿದ್ದಾರೆ.
ಮೊದಲಿಗೆ, ಶ್ರೀ. ರೇಣುಕಾಸ್ವಾಮಿ ಅವರ ಕುಟುಂಬಸ್ತರಿಗೆ ನಾನು ಹೃದಯಪೂರ್ವಕ ಸಾಂತ್ವನವನ್ನು ತಿಳಿಸಲು ಬಯಸುತ್ತೇನೆ. ಅವರ ಅಗಲಿಕೆಯನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಮನೆಯವರಿಗೆ ಕೊಡಲಿ ಎಂದು ಪ್ರಾರ್ಥಿಸುತ್ತೇನೆ.
ಕಳೆದ ಕೆಲವು ದಿನಗಳಲ್ಲಿ, ದರ್ಶನ್ ಅವರು, ನಾನು, ನಮ್ಮ ಮಗ, ದರ್ಶನರ ಸೆಲೆಬ್ರಿಟೀಸ್ ಮತ್ತು ಕುಟುಂಬದವರು ಪದಗಳಲ್ಲಿ ವಿವರಿಸಲಾಗದ ನೋವನ್ನು ಅನುಭವಿಸಿದ್ದೇವೆ.
ಗೌರವಾನ್ವಿತ ನ್ಯಾಯಾಲಯದ ಮೇಲ್ಕಂಡ ಆದೇಶದಂತೆ, ಇನ್ನು ಮುಂದಾದರೂ ಅಸತ್ಯಗಳು ಹಾಗೂ ಅನಧೀಕೃತ ಮಾಹಿತಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗದಿರಲಿ ಎಂದು ಕೇಳಿಕೊಳ್ಳುತ್ತೇನೆ.ತಾಯಿ ಚಾಮುಂಡೇಶ್ವರಿ ಮತ್ತು ನಮ್ಮ ನ್ಯಾಯ ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ.
ಸತ್ಯಮೇವ ಜಯತೆ! ಎಂದು ಬರೆದುಕೊಂಡಿದ್ದಾರೆಯ ಅಲ್ಲದೇ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಕಟಿಸದಂತೆ ಮಾಧ್ಯಮಕ್ಕೆ ಹೇರಿರುವ ಕೋರ್ಟ್ ನಿರ್ಬಂಧದ ಪ್ರತಿಯನ್ನು ಶೇರ್ ಮಾಡಿದ್ದಾರೆ.