Thursday, May 9, 2024
HomeUncategorizedಮೈಸೂರು ದಸರಾಕ್ಕೆ ರಾಷ್ಟ್ರಪತಿಗಳಿಂದ ವಿದ್ಯುಕ್ತ ಚಾಲನೆ

ಮೈಸೂರು ದಸರಾಕ್ಕೆ ರಾಷ್ಟ್ರಪತಿಗಳಿಂದ ವಿದ್ಯುಕ್ತ ಚಾಲನೆ

spot_img
- Advertisement -
- Advertisement -

ಮೈಸೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಟಾರ್ಚನೆ ಮಾಡುವ ಮೂಲಕ ವೃಶ್ಚಿಕ ಲಗ್ನದಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ಕೊಟ್ಟಿದ್ದಾರೆ.

ಮೈಸೂರಿನ ಮಂಡಕಳ್ಳಿ ಏರ್ ಪೋರ್ಟ್ ಗೆ ಆಗಮಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಂತರ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ ಉದ್ಘಾಟಿಸಿದ್ದಾರೆ.  ವೃಶ್ಚಿಕ ಲಗ್ನದಲ್ಲಿ ಐತಿಹಾಸಿಕ ದಸರಾ ಮಹೋತ್ಸವಕ್ಕೆ ರಾಷ್ಟ್ರಪತಿ ಚಾಲನೆ ನೀಡಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ, ಸಚಿವ ಸಂಪುಟದ ಸಚಿವರುಗಳು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!