- Advertisement -
- Advertisement -
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಲಾಗಿರುವ 6ನೇ ವರ್ಷದ ದಸರಾ ಬಹುಭಾಷಾ ಕವಿಗೋಷ್ಠಿಯು ಅಕ್ಟೋಬರ್ 15ರಂದು ಅಪರಾಹ್ನ 2:30ಕ್ಕೆ ಮಂಗಳೂರಿನ ತುಳು ಭವನದಲ್ಲಿ ನಡೆಯಲಿದೆ.
ತುಳು ಸಾಹಿತ್ಯ ಅಕಾಡೆಮಿ, ತುಳು ಪರಿಷತ್ ಹಾಗೂ ಮಯೂರಿ ಫೌಂಡೇಶನ್ ಜಂಟಿಯಾಗಿ ಈ ಕವಿಗೋಷ್ಠಿಯನ್ನು ಆಯೋಜಿಸಿವೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ವ್ಯಾಪ್ತಿಯ 14 ಭಾಷೆಗಳ ಕವಿಗಳು ತಮ್ಮ ಕವಿತೆಗಳನ್ನು ವಾಚಿಸಲಿದ್ದಾರೆ.
ಮೂಲ್ಕಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಹಾಗೂ ಸಾಹಿತಿ ಡಾ. ವಾಸುದೇವ ಬೆಳ್ಳೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಪೂವರಿ ತುಳು ಪತ್ರಿಕೆಯ ಸಂಪಾದಕ ವಿಜಯಕುಮಾರ್ ಭಂಡಾರಿ ಹೆಬ್ಬಾರಬೈಲು ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಲೇಖಕಿ ಡಾ. ಝೀಟಾ ಲೋಬೋ ಹಾಗೂ ಕವಿ ಯು.ಕೆ. ಖಾಲಿದ್ ಉಳ್ಳಾಲ್ಕಾರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
- Advertisement -


