Thursday, May 9, 2024
Homeತಾಜಾ ಸುದ್ದಿಎಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶಾತಿಗೆ ನ.30 ಕೊನೆಯ ದಿನ

ಎಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶಾತಿಗೆ ನ.30 ಕೊನೆಯ ದಿನ

spot_img
- Advertisement -
- Advertisement -

ಬೆಂಗಳೂರು: ಎಂಜಿನಿಯರಿಂಗ್ ಕೋರ್ಸ್ ಗಳಿಗೆ ಪ್ರವೇಶಾವಕಾಶದ ಕೊನೆಯ ದಿನಾಂಕವನ್ನು ಸುಪ್ರೀಂ ಕೋರ್ಟ್ ನವೆಂಬರ್ 30ರವರೆಗೆ ವಿಸ್ತರಿಸಿದೆ. ಈ ಮುನ್ನ ಎಐಸಿಟಿಇ ನಿಗದಿ ಮಾಡಿದ್ದ ಪ್ರಕಾರ ಎಂಜಿನಿಯರಿಂಗ್ ಕೋರ್ಸ್ ಗಳಿಗೆ ಪ್ರವೇಶಕ್ಕೆ ಅಕ್ಟೋಬರ್ 25 ಕೊನೆಯ ದಿನವಾಗಿತ್ತು.

ಆದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ದಿನಾಂಕವನ್ನು ವಿಸ್ತರಿಸಬೇಕೆಂದು ಕೋರಿ ಸುಪ್ರೀಂಕೋರ್ಟಿನ ಮೊರೆ ಹೋಗಿತ್ತು. ಈ ಮನವಿಯನ್ನು ನ್ಯಾಯಾಲಯವು ಪುರಸ್ಕರಿಸಿದ್ದು ಕಾಲಾವಕಾಶವನ್ನು ನವೆಂಬರ್ 30 ರವರೆಗೆ ವಿಸ್ತರಿಸಿದೆ.

ಹೀಗಾಗಿ ಈಗ ಒಂದು ತಿಂಗಳಿಗಿಂತ ಹೆಚ್ಚು ಕಾಲಾವಕಾಶ ಸಿಕ್ಕಿದ್ದು,‌ ಇಷ್ಟರಲ್ಲಿ ಕೌನ್ಸೆಲಿಂಗ್ ಸೇರಿದಂತೆ ಪ್ರವೇಶ ಪ್ರಕ್ರಿಯೆ ಮುಗಿಸಲು ಉನ್ನತ ಶಿಕ್ಷಣ ಇಲಾಖೆ ಮತ್ತು ಕೆಇಎ ಸಿದ್ಧತೆ ಮಾಡಿಕೊಂಡಿದೆ.

- Advertisement -
spot_img

Latest News

error: Content is protected !!