Saturday, May 4, 2024
Homeಚಿಕ್ಕಮಗಳೂರುಇಂದಿನಿಂದ ದತ್ತಪೀಠದಲ್ಲಿ ದತ್ತಜಯಂತಿ: ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್

ಇಂದಿನಿಂದ ದತ್ತಪೀಠದಲ್ಲಿ ದತ್ತಜಯಂತಿ: ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್

spot_img
- Advertisement -
- Advertisement -

ಚಿಕ್ಕಮಗಳೂರು: ಇಂದಿನಿಂದ ಮೂರು ದಿನಗಳವರೆಗೆ ದತ್ತಪೀಠದಲ್ಲಿ ದತ್ತಜಯಂತಿ ನಡೆಯಲಿದ್ದು, ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ದತ್ತಜಯಂತಿ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪಥಸಂಚಲನ ನಡೆಸಿದ್ದಾರೆ. ಚಿಕ್ಕಮಗಳೂರಿನ ಎಂಜಿ ರಸ್ತೆ, ಐಜಿ ರಸ್ತೆ, ಬಸವನಹಳ್ಳಿ ರಸ್ತೆಯಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು., ವಿವಿಧ ಜಿಲ್ಲೆಗಳಿಂದ ಚಿಕ್ಕಮಗಳೂರಿಗೆ 4500 ಪೊಲೀಸರು ನಿಯೋಜನೆ ಮಾಡಲಾಗಿದೆ.

ದತ್ತ ಜಯಂತಿ ಕಾರ್ಯಕ್ರಮಗಳ ದಿನದಂದು ಸಂಚಾರ ವ್ಯವಸ್ಥೆಯಲ್ಲಿ ಕೆಲವೊಂದು ಮಾರ್ಪಡುಗಳನ್ನು ಮಾಡಲಾಗಿದೆ. ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಕ್ಯಾಮೆರಾ, ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎರಡು ಸಮುದಾಯಗಳ ಮುಖಂಡರೊಂದಿಗೆ ಸಭೆ ನಡೆಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟರ್ ಹಾಕದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಅನ್ಯ ಧರ್ಮ ಜನರ ಭಾವನೆಗೆ ಧಕ್ಕೆಯಾಗುಂತಹ ಘೋಷಣೆಗಳನ್ನು ಕೂಗದಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ತಿಳಿಸಿದ್ದಾರೆ. ದತ್ತಜಯಂತಿ ಹಿನ್ನೆಲೆ ನಿನ್ನೆ ಬೆಳಿಗ್ಗೆ 6 ಗಂಟೆಯಿಂದ ಡಿ. 9ರ ಬೆಳಿಗ್ಗೆ 10 ಗಂಟೆಯವರೆ ಮುಳ್ಳಯ್ಯನಗಿರಿ ಭಾಗದ ಎಲ್ಲಾ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿತ್ತು.

- Advertisement -
spot_img

Latest News

error: Content is protected !!