Wednesday, June 3, 2026
Homeತಾಜಾ ಸುದ್ದಿದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ; ಗೆಲುವಿನ ನಗೆ ಬೀರಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಮಲ್ಲಿಕಾರ್ಜುನ್‌

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ; ಗೆಲುವಿನ ನಗೆ ಬೀರಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಮಲ್ಲಿಕಾರ್ಜುನ್‌

- Advertisement -
- Advertisement -


ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಮಲ್ಲಿಕಾರ್ಜುನ್‌ ಗೆಲುವಿನ ನಗೆ ಬೀರಿದ್ದಾರೆ.

ಜಿದ್ದಾಜಿದ್ದಿನಿಂದ ಕೂಡಿದ್ದ ಫಲಿತಾಂಶದಲ್ಲಿ ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಪುತ್ರ ಸಮರ್ಥ್‌ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಸೋಲನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ವಿರುದ್ಧ  4967 ಮತಗಳ ಅಂತರದಿಂದ ಗೆದ್ದಿದ್ದು, 20ನೇ ಸುತ್ತಿನ ಎಣಿಕೆ ಬಳಿಕ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸಿದರು.

- Advertisement -

Latest News

error: Content is protected !!