Wednesday, November 18, 2026
Homeಕರಾವಳಿಬ್ರಹ್ಮರಕೂಟ್ಲು ಟೋಲ್ ಗೇಟ್ ವಿರುದ್ಧ ಹಗಲು-ರಾತ್ರಿ ಧರಣಿ: ತೆರವುಗೊಳಿಸುವಂತೆ ಮಾಜಿ ಸಚಿವ ರಮಾನಾಥ ರೈ, ಯುವ...

ಬ್ರಹ್ಮರಕೂಟ್ಲು ಟೋಲ್ ಗೇಟ್ ವಿರುದ್ಧ ಹಗಲು-ರಾತ್ರಿ ಧರಣಿ: ತೆರವುಗೊಳಿಸುವಂತೆ ಮಾಜಿ ಸಚಿವ ರಮಾನಾಥ ರೈ, ಯುವ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಮಿಥುನ್ ರೈ ಆಗ್ರಹ

- Advertisement -
- Advertisement -

ಬಂಟ್ವಾಳ: ನಿಯಮಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಬ್ರಹ್ಮರಕೂಟ್ಲು ಟೋಲ್ ಗೇಟ್ ಅನ್ನು ಎಲ್ಲರೂ ವಿರೋಧಿಸುತ್ತಿದ್ದಾರೆಯೇ ಹೊರತು ಯಾರೂ ಸಮರ್ಥಿಸುತ್ತಿಲ್ಲ ಎಂದು ಮಾಜಿ ಸಚಿವ ಹಾಗೂ ಟೋಲ್ ಗೇಟ್ ತೆರವು ಹೋರಾಟ ಸಮಿತಿಯ ಗೌರವಾಧ್ಯಕ್ಷ ಬಿ. ರಮಾನಾಥ ರೈ ಹೇಳಿದ್ದಾರೆ.

ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಮಂಗಳವಾರ ಆರಂಭಗೊಂಡ ಹಗಲು-ರಾತ್ರಿ ಧರಣಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ನೆರೆ ಪರಿಹಾರ ರಸ್ತೆಯಲ್ಲಿ ಸುಂಕ ವಸೂಲಿ ಮಾಡುತ್ತಿರುವ ಏಕೈಕ ಟೋಲ್ ಗೇಟ್ ಬ್ರಹ್ಮರಕೂಟ್ಲು ಆಗಿದೆ ಎಂದು ಟೀಕಿಸಿದ ಅವರು, ಇಲ್ಲಿ ಯಾವುದೇ ಮೂಲಭೂತ ಸೌಕರ್ಯಗಳು ಸಮರ್ಪಕವಾಗಿಲ್ಲ. ಕೇಂದ್ರ ಹೆದ್ದಾರಿ ಇಲಾಖೆಯ ನಿಯಮದಂತೆ ಟೋಲ್ ಕೇಂದ್ರಗಳ ನಡುವಿನ ಅಂತರವನ್ನೂ ಪಾಲಿಸಲಾಗಿಲ್ಲ ಎಂದು ಆರೋಪಿಸಿದರು.

ಬೆಳ್ತಂಗಡಿ ಮತ್ತು ಉಪ್ಪಿನಂಗಡಿ ಕಡೆಯಿಂದ ಮಂಗಳೂರಿಗೆ ಬರುವ ವಾಹನ ಸವಾರರು ಎರಡು ಕಡೆ ಟೋಲ್ ಪಾವತಿಸಬೇಕಾದ ಪರಿಸ್ಥಿತಿ ಎದುರಾಗಲಿದೆ. ಟೋಲ್ ಗೇಟ್ ವಿರುದ್ಧ ಹಲವು ಹೋರಾಟಗಳು ನಡೆದಿದ್ದರೂ ಹೆದ್ದಾರಿ ಇಲಾಖೆ ಜನರ ತಾಳ್ಮೆ ಪರೀಕ್ಷಿಸುತ್ತಿದೆ. ಕಾನೂನು ಮತ್ತು ನಿಯಮಗಳಿಗೆ ಗೌರವ ನೀಡಿ ಹಂತ ಹಂತವಾಗಿ ಹೋರಾಟ ನಡೆಸುತ್ತಿದ್ದೇವೆ. ಬೇಡಿಕೆ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಯುವ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಮಿಥುನ್ ರೈ ಮಾತನಾಡಿ, ಉಪ್ಪಿನಂಗಡಿ-ವಳಾಲು ಪ್ರದೇಶದಲ್ಲಿ ಟೋಲ್ ವಸೂಲಿ ಆರಂಭವಾದ ದಿನ ಬ್ರಹ್ಮರಕೂಟ್ಲು ಟೋಲ್ ಗೇಟ್‌ಗೆ ಅಂತ್ಯವಾಗಲಿದೆ ಎಂದು ಹೇಳಿದರು.

ರಾಜ್ಯ ರೈತ ಸಂಘದ ರೂಪೇಶ್ ಮಾತನಾಡಿ, ಜನರು ಟೋಲ್ ಶುಲ್ಕ ಪಾವತಿಸದೆ ಅಸಹಕಾರ ಚಳವಳಿಗೆ ಮುಂದಾಗಬೇಕು ಎಂದು ಕರೆ ನೀಡಿದರು.

ಧರಣಿಯ ಅಧ್ಯಕ್ಷತೆಯನ್ನು ಹೋರಾಟ ಸಮಿತಿಯ ಸಂಚಾಲಕ ಮೋಹನ್ ಶೆಟ್ಟಿ ಪಂಜಿಕಲ್ಲು ವಹಿಸಿದ್ದರು. ಮಮತಾ ಗಟ್ಟಿ, ಶಾಲೆಟ್ ಪಿಂಟೋ, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಅಶ್ವಿನಿ ಕುಮಾರ್ ರೈ, ಅಬ್ಬಾಸ್ ಅಲಿ, ಉಷಾ ಅಂಚನ್, ಭಾರತಿ ಪ್ರಶಾಂತ್ ಸೇರಿದಂತೆ ಹಲವರು ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದರು.

- Advertisement -

Latest News

error: Content is protected !!