Friday, June 5, 2026
Homeಕರಾವಳಿಇಂದು ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮವಾಸ್ತವ್ಯ

ಇಂದು ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮವಾಸ್ತವ್ಯ

- Advertisement -
- Advertisement -

ಸುಳ್ಯ; ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಡಿಯಲ್ಲಿ  ದ.ಕ ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ ಅವರು ಇಂದು (ಮಾರ್ಚ್ 18, ಶನಿವಾರ) ಬೆಳಿಗ್ಗೆ 10 ಗಂಟೆಯಿಂದ ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಾಲೆ ಮಜಲು ಶ್ರೀ ವೆಂಕಟೇಶ್ವರ ಸಭಾ ಭವನದಲ್ಲಿ ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ.

ಈ ಸಂದರ್ಭದಲ್ಲಿ ಅವರು ಸ್ಥಳೀಯ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಿದ್ದಾರೆ. ಡಿಸಿಯವರೊಂದಿಗೆ ತಾಲೂಕು ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಭಾಗವಹಿಸಲಿದ್ದು, ಗ್ರಾಮಸ್ಥರು ತಮ್ಮ ಅಹವಾಲು ಹಾಗೂ ಸಮಸ್ಯೆಗಳ‌ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ಅಪರ ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.

- Advertisement -

Latest News

error: Content is protected !!