Thursday, June 4, 2026
Homeಕರಾವಳಿಮಂಗಳೂರುಮಂಗಳೂರು;  ಕಾಶ್ಮೀರದಲ್ಲಿ ಉಗ್ರರ ದಾಳಿ ಹಿನ್ನೆಲೆ: ದ.ಕ ಜಿಲ್ಲೆಯಿಂದ ಕಾಶ್ಮೀರಕ್ಕೆ ಪ್ರವಾಸಕ್ಕೆ ಹೋದವರ ಮಾಹಿತಿ ನೀಡಲು...

ಮಂಗಳೂರು;  ಕಾಶ್ಮೀರದಲ್ಲಿ ಉಗ್ರರ ದಾಳಿ ಹಿನ್ನೆಲೆ: ದ.ಕ ಜಿಲ್ಲೆಯಿಂದ ಕಾಶ್ಮೀರಕ್ಕೆ ಪ್ರವಾಸಕ್ಕೆ ಹೋದವರ ಮಾಹಿತಿ ನೀಡಲು ಜಿಲ್ಲಾಧಿಕಾರಿ ಸೂಚನೆ

- Advertisement -
- Advertisement -

ಮಂಗಳೂರು; ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಕರ್ನಾಟಕದ ಇಬ್ಬರು ಪ್ರವಾಸಿಗರು ಬಲಿಯಾಗಿದ್ದು, ದ.ಕ ಜಿಲ್ಲೆಯಿಂದ ಕಾಶ್ಮೀರಕ್ಕೆ ಪ್ರವಾಸಕ್ಕೆ ಹೋದವರ ಮಾಹಿತಿ ನೀಡಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ದಿನಾಂಕ 22.04.2025 ರಂದು ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಲಾಮ್ ಇಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ದಾಳಿಯಲ್ಲಿ ಕೆಲವು ಪ್ರವಾಸಿಗರು ಮೃತರಾಗಿರುವ ಹಾಗೂ ಗಾಯಗೊಂಡಿರುವುದು ತಿಳಿದು ಬಂದಿರುತ್ತದೆ.ದಕ್ಷಿಣ ಕನ್ನಡ ಜಿಲ್ಲೆಯಿಂದ ಜಮ್ಮು ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿ ಮೇಲ್ಕಂಡ ಘಟನೆಯಲ್ಲಿ ಸಿಲುಕಿಕೊಂಡಿದಲ್ಲಿ ಅಂತಹವರುಗಳ ಮಾಹಿತಿಯನ್ನು ಜಿಲ್ಲಾ ವಿಪತ್ತು ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 0824 2442590. ಅಥವಾ 1077 ಗೆ ಕರೆ ಮಾಡಿ ಮಾಹಿತಿ ನೀಡಲು ಕೋರಿದೆ ಎಂದಿದ್ದಾರೆ.

- Advertisement -

Latest News

error: Content is protected !!