Friday, May 17, 2024
Homeಕರಾವಳಿಬೆಳ್ತಂಗಡಿ : ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು, ಮನವಿಯತೆ ಮೆರೆದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ

ಬೆಳ್ತಂಗಡಿ : ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು, ಮನವಿಯತೆ ಮೆರೆದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ

spot_img
- Advertisement -
- Advertisement -

ಬೆಳ್ತಂಗಡಿ : ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದು ಕಾರಿನಲ್ಲಿದ್ದ ಮಹಿಳೆಯ ತಲೆಗೆ ಗಾಯವಾಗಿದ್ದು ತಕ್ಷಣ ಹಿಂಬದಿಯಿಂದ ಬರುತ್ತಿದ್ದ ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ನೋಡಿ ಸ್ಥಳಕ್ಕೆ ಧಾವಿಸಿ ತಹಶೀಲ್ದಾರ್ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಮನವಿಯತೆ ಮೇರೆದ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕಾಶಿಬೆಟ್ಟಿನಲ್ಲಿ ಇಂದು ಸಂಜೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕಾಶಿಬೆಟ್ಟು ಎಂಬಲ್ಲಿ ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ಕೋಡುವ ರಭಸದಲ್ಲಿ ಹುಂಡೈ ಕಂಪನಿಯ ವೆನ್ಯೂ ಕಾರು ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದಿದೆ ಕಾರಿನಲ್ಲಿ ತುಮಕೂರು ಮೂಲದ ನಾಲ್ಕು ಜನ ಇದ್ದು ಅದರಲ್ಲಿ ಮಮತಾ(36) ಎಂಬ ಮಹಿಳೆಯ ತಲೆಗೆ ಗಾಯವಾಗಿತ್ತು. ಅದೇ ದಾರಿಯಲ್ಲಿ ಚಾರ್ಮಾಡಿ ಕಡೆ ಹೋಗುತ್ತಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಕಾರು ನಿಲ್ಲಿಸಿ ಸ್ಥಳಕ್ಕೆ ಹೋಗಿ ವಿಚಾರಿಸಿ, ತಕ್ಷಣ ಜೊತೆಯಲ್ಲಿ ಇದ್ದ ಬೆಳ್ತಂಗಡಿ ತಹಶೀಲ್ದಾರ್ ವಾಹನದಲ್ಲಿ ಕರೆದುಕೊಂಡು ಹೋಗಲು ಸೂಚಿಸಿದ್ದು ಅದರಂತೆ ತಹಶೀಲ್ದಾರ್ ಮಹೇಜ್.ಜೆ ವಾಹನ ಚಾಲಕ ಸಂತೋಷ್ ಕುಮಾರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ವಾಪಸ್ ಕಾರು ಬಿದ್ದ ಜಾಗಕ್ಕೆ ಕರೆತಂದು ಬಿಟ್ಟು ಮನವಿಯತೆ ಮೆರೆದಿದ್ದಾರೆ. ಚಾಲಕ ಸಂತೋಷ್ ಕುಮಾರ್ ಜೊತೆ ಕಂದಾಯ ನಿರೀಕ್ಷಕ ಪ್ರತೀಷ್ , ವಿ.ಎ ನಾರಾಯಣ ಕುಲಾಲ್ ಆಸ್ಪತ್ರೆಗೆ ದಾಖಲಿಸಲು ಸಹಕರಿಸಿದರು.

ತುಮಕೂರು ಜಿಲ್ಲೆಯವರಾದ ನಾಲ್ಕು ಜನ ಮಗಳನ್ನು ಅಳ್ವಾಸ್ ಕಾಲೇಜಿಗೆ ಸೇರಿಸಿ ವಾಪಸ್ ಚಾರ್ಮಾಡಿ ಘಾಟ್ ಅಗಿ ಊರಿಗೆ ಮರಳುತ್ತಿದ್ದಾಗ ಕಾಶಿಬೆಟ್ಟಿನಲ್ಲಿ ಈ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಇಂದು ಬೆಳ್ತಂಗಡಿ ತಾಲೂಕಿನ ವಿವಿಧ ಭಾಗಕ್ಕೆ ಭೇಟಿ ನೀಡುತ್ತಿದ್ದರು ಈ ವೇಳೆ ಬೆಳ್ತಂಗಡಿಯಿಂದ ಚಾರ್ಮಾಡಿ ಘಾಟ್ ಪ್ರದೇಶ ವೀಕ್ಷಣೆಗೆ ಹೋಗುವಾಗ ಅಪಘಾತ ಸಂಭವಿಸಿದೆ ಈ ವೇಳೆ ಬೆಳ್ತಂಗಡಿ ತಹಶೀಲ್ದಾರ್ ಮಹೇಜ್.ಜೆ ತಮ್ಮ ವಾಹನದಿಂದ ಇಳಿದು ಜಿಲ್ಲಾಧಿಕಾರಿ ಕಾರಿನಲ್ಲಿ ಚಾರ್ಮಾಡಿ ಘಾಟ್ ಗೆ ಹೋದರು.

- Advertisement -
spot_img

Latest News

error: Content is protected !!