Tuesday, May 7, 2024
Homeಕರಾವಳಿಮಂಗಳೂರು ವಿವಿಯ ಬಾಕಿ ಉಳಿದ ಪರೀಕ್ಷೆಗಳನ್ನು ನಡೆಸಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು ವಿವಿಯ ಬಾಕಿ ಉಳಿದ ಪರೀಕ್ಷೆಗಳನ್ನು ನಡೆಸಲು ಜಿಲ್ಲಾಧಿಕಾರಿ ಸೂಚನೆ

spot_img
- Advertisement -
- Advertisement -

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಉಳಿದ ಪರೀಕ್ಷೆಗಳನ್ನು ಆಗಸ್ಟ್ 11 ರಿಂದ ನಡೆಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಅವರು ಸೂಚಿಸಿದ್ದಾರೆ.

‘ಆಗಸ್ಟ್ 4 ರಂದು ನಿಗದಿಯಾಗಿದ್ದ ವಿಶ್ವವಿದ್ಯಾನಿಲಯ ಪರೀಕ್ಷೆಗಳು ಹೆಚ್ಚುತ್ತಿರುವ covid ಪ್ರಕರಣಗಳಿಂದ ಮುಂದೂಡಲ್ಪಟ್ಟವು. ಮಂಗಳೂರು ವಿಶ್ವವಿದ್ಯಾನಿಲಯವು ಆಗಸ್ಟ್ 11 ರಿಂದ ಬಾಕಿ ಉಳಿದಿರುವ ಪರೀಕ್ಷೆಗಳನ್ನು ಮುಂದುವರಿಸಬಹುದು.ವಿದ್ಯಾರ್ಥಿಗಳು ಅಸೈನ್ ಮೆಂಟ್ ಗಳನ್ನು ಆನ್‌ಲೈನ್‌ನಲ್ಲಿ ಅಥವಾ ಅಂಚೆ ಮೂಲಕ ಆಯಾ ಕಾಲೇಜಿಗೆ ಸಲ್ಲಿಸುವ ವ್ಯವಸ್ಥೆ ಮಾಡಬೇಕು.ಪದವಿ ಪರೀಕ್ಷೆಗೆ ಹಾಜರಾಗಲು ಇಚ್ಚಿಸುವ ಅನಾರೋಗ್ಯ ಪೀಡಿತ ಅಥವಾ ಕೋವಿಡ್ ಪೀಡಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೋಣೆಗಳಲ್ಲಿ ಪರೀಕ್ಷೆಗಳನ್ನು ನಡೆಸಬೇಕು ಎಂದಿದ್ದಾರೆ.

29,052 ಪದವಿಪೂರ್ವ ವಿದ್ಯಾರ್ಥಿಗಳು, 5,493 ಸ್ನಾತಕೋತ್ತರ ವಿದ್ಯಾರ್ಥಿಗಳು ಮತ್ತು 2,000 ವಿದ್ಯಾರ್ಥಿಗಳು ಕೇರಳದಿಂದ ಪರೀಕ್ಷೆಗಳನ್ನು ಬರೆಯಲಿದ್ದಾರೆ. ಯಾವುದೇ ರೀತಿಯ ಶಿಕ್ಷೆ ಅಥವಾ ದಂಡವನ್ನು ವಿಧಿಸದೆ ಪರೀಕ್ಷೆಗಳನ್ನು ಸುಗಮವಾಗಿ ನಿರ್ವಹಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು, ‘ಎಂದು DC ಕಾಲೇಜು ಪ್ರಾಂಶುಪಾಲರಿಗೆ ಸೂಚನೆ ಕೊಟ್ಟಿದ್ದಾರೆ.

- Advertisement -
spot_img

Latest News

error: Content is protected !!