Saturday, May 18, 2024
Homeಕರಾವಳಿಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಿಂದ ಕೇರಳ ರಾಜ್ಯಕ್ಕೆ ಸರ್ಕಾರಿ ಬಸ್‌ ಸಂಚಾರ ಪುನರಾರಂಭಕ್ಕೆ ಡಿ.ಸಿ ಆದೇಶ..!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಿಂದ ಕೇರಳ ರಾಜ್ಯಕ್ಕೆ ಸರ್ಕಾರಿ ಬಸ್‌ ಸಂಚಾರ ಪುನರಾರಂಭಕ್ಕೆ ಡಿ.ಸಿ ಆದೇಶ..!

spot_img
- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಿಂದ ಕೇರಳ ರಾಜ್ಯಕ್ಕೆ ಕೊವೀಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಿ ಕ.ರಾ.ರ.ಸಾ.ನಿ.ದ ಬಸ್ ಗಳು ಮಂಗಳೂರು ಮತ್ತು ಪುತ್ತೂರು ವಿಭಾಗದ ಡಿಪ್ಪೊಗಳಿಂದ ಅಂತರ್ ರಾಜ್ಯ ಬಸ್ ಓಡಾಟಕ್ಕೆ ಅನುಮತಿಸಿ ನ.17ರ ಬುಧವಾರ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ನೀಡಿದ್ದಾರೆ.

ಪ್ರಸ್ತುತ ರಾಜ್ಯ ಸರಕಾರವು ಕೋವಿಡ್-19 ಪರಿಸ್ಥಿತಿಯನ್ನು ಅವಲೋಕಿಸಿ ಕಾಸರಗೋಡು ಜಿಲ್ಲೆಯಿಂದ ವಿದ್ಯಾಭ್ಯಾಸ, ಕಚೇರಿ ಕೆಲಸ, ವ್ಯಾಪಾರ-ವಹಿವಾಟು ಸೇರಿದಂತೆ ಇತರ ಕಾರಣಗಳಿಗೆ ಭಾರೀ ಸಂಖ್ಯೆಯಲ್ಲಿ ದಿನನಿತ್ಯ ಸಾವಿರಾರು ಮಂದಿಗೆ ಅನುಕೂಲವಾಗುವಂತೆ ಮಂಗಳೂರು – ಕಾಸರಗೋಡು ನೇರ ಸಂಚಾರಕ್ಕೆ ಭೇಡಿಕೆ ಬಂದಿರುವ ಹಿನ್ನಲೆಯಲ್ಲಿ ಪ್ರಯಾಣಿಕರು ಕೊವೀಡ್ ಮಾರ್ಗಸೂಚಿ ಪಾಲಿಸುವಂತೆ ಷರತ್ತುಬದ್ಧ ಅನುಮತಿ ನೀಡಿದ್ದಾರೆ.

ಕೇರಳ ಮತ್ತು ಕರ್ನಾಟಕದ ಸರ್ಕಾರಿ (ಕೆಎಸ್ಸಾರ್ಟಿಸಿ)ಗಳಿಗೆ ಮಾತ್ರ ಜಿಲ್ಲಾಧಿಕಾರಿಗಳು ಸಂಚರಿಸಿಲು ಅನುಮತಿಸಿದ್ದು, ಪ್ರಯಾಣಿಸುವವರು ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಮಾತ್ರವಲ್ಲದೆ ಬಸ್ ಮೂಲಕ ಸಂಚರಿಸುವ ಪ್ರಯಾಣಿಕರು 72 ಗಂಟೆಗಳ ಒಳಗೆ ಮಾಡಿಸಿರುವ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ವರದಿಯನ್ನು ಆಯಾ ಬಸ್‌ನ ನಿರ್ವಾಹಕರು (ಕಂಡೆಕ್ಟರ್) ಖಚಿತಪಡಿಸ ಕೊಳ್ಳಬೇಕು. ಕೋವಿಡ್ ಲಸಿಕೆ 2ಡೋಸ್ ಪಡೆದಿರಬೇಕು ಹಾಗೂ ದಿನಂಪ್ರತಿ ಓಡಾಟದ ಪ್ರಯಾಣಿಕರು 7 ದಿನಕ್ಕೊಮ್ಮೆಯಂತೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ವರದಿಯನ್ನು ಬಸ್‌ನ ನಿರ್ವಾಹಕರು ಖಚಿತಪಡಿಸಕೊಳ್ಳಬೇಕು.

ಈ ಕ್ರಮಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ ಕರ್ನಾಟಕ ಸಾಂಕ್ರಮಿಕ ರೋಗಗಳ ಅಧಿನಿಯಮ-2020, ವಿಪತ್ತು ನಿರ್ವಹಣಾ ಕಾಯ್ದೆ 2005ರಡಿ ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!