Sunday, May 5, 2024
Homeಕರಾವಳಿದಕ್ಷಿಣಕನ್ನಡ ಜಿಲ್ಲೆಯಲ್ಲಿ ಹೆಚ್ಚಾಗ್ತಿದೆ ಕೊರೊನಾ ಆರ್ಭಟ: ಜಿಲ್ಲೆಯಲ್ಲಿ ಜಾತ್ರೆ, ಸಮಾರಂಭ, ಸಾರ್ವಜನಿಕ ಕಾರ್ಯಕ್ರಮಗಳನ್ನು...

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಹೆಚ್ಚಾಗ್ತಿದೆ ಕೊರೊನಾ ಆರ್ಭಟ: ಜಿಲ್ಲೆಯಲ್ಲಿ ಜಾತ್ರೆ, ಸಮಾರಂಭ, ಸಾರ್ವಜನಿಕ ಕಾರ್ಯಕ್ರಮಗಳನ್ನು ನಿಷೇಧಿಸಿ ಡಿಸಿ ಆದೇಶ

spot_img
- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತೋಟಿಗೆ ಬಂದಿದ್ದ ಕೊರೊನಾ ವೈರಸ್ ಇದೀಗ ಮತ್ತೆ ಉಲ್ಬಣವಾಗುತ್ತಿದ್ದು, ಈ ಹಿನ್ನೆಲೆ ಜಿಲ್ಲೆಯಾದ್ಯಂತ ಸಾರ್ವಜನಿಕ ಜಾತ್ರೆ, ಉತ್ಸವ, ಸಭೆ, ಸಮಾರಂಭ ಮುಂತಾದ ಸಾರ್ವಜನಿಕ ಕಾರ್ಯಕ್ರಮಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಸುತ್ತೋಲೆಯನ್ನು ಹೊರಡಿಸಿರುವ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು, “”ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಆದೇಶದಂತೆ ಜಿಲ್ಲಾಡಳಿತವು ಎಲ್ಲಾ ಅವಶ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸದ್ಯ ಕೊರೊನಾ ಸೋಂಕು ಹರಡುವ ಭೀತಿ ಜಿಲ್ಲೆಯಲ್ಲಿ ಪುನಃ ಆರಂಭವಾಗಿದೆ.”

“ಕಳೆದ ಹದಿನೈದು ದಿನಗಳಿಂದ ಸತತವಾಗಿ ಕೊರೊನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಲ್ಲಿ ಮುಂಬರುವ ಹಬ್ಬಗಳಾದ ಯುಗಾದಿ, ಹೋಳಿ ಹಬ್ಬ, ಷಬ್-ಎ-ಬರಾತ್, ಗುಡ್‌ಫ್ರೈಡೆ ಇತ್ಯಾದಿ ಸಂದರ್ಭಗಳಲ್ಲಿ ಸಾರ್ವಜನಿಕ ಕಾರ್ಯಕ್ರಮಗಳನ್ನು ನಡೆಸದಂತೆ ಮತ್ತು ಧಾರ್ಮಿಕ ಉತ್ಸವಗಳೊಂದಿಗೆ ಜಾತ್ರೆ/ಮೇಳಗಳನ್ನು ನಡೆಸದಂತೆ ಆದೇಶಿಸಲಾಗಿದೆ” ಎಂದು ತಿಳಿಸಿದ್ದಾರೆ.

ಈ ಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಹೊರಡಿಸಿರುವ ಸೂಚನೆಗಳು ಇಲ್ಲಿವೆ.

* ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ಧಾರ್ಮಿಕ ಸ್ಥಳಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಜಾತ್ರೆ, ಸಭೆ, ಸಮಾರಂಭ ಮತ್ತು ಆಚರಣೆಗಳನ್ನು ನಿಷೇಧಿಸಲಾಗಿದೆ.

* ಎಲ್ಲಾ ರೀತಿಯ ಧಾರ್ಮಿಕ ಕಾರ್ಯಕ್ರಮಗಳನ್ನು ಸಾಂಕೇತಿಕವಾಗಿ ಆಚರಿಸುವುದು. ಮುಂಬರುವ ಹಬ್ಬಗಳಾದ ಯುಗಾದಿ, ಹೋಳಿ ಹಬ್ಬ, ಷಬ್-ಎ-ಬರಾತ್, ಗುಡ್‌ಫ್ರೈಡೆ ಇತ್ಯಾದಿ ಸಂದರ್ಭಗಳಲ್ಲಿ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕ ಕಾರ್ಯಕ್ರಮಗಳನ್ನು ನಡೆಸದಂತೆ ಮತ್ತು ಧಾರ್ಮಿಕ ಉತ್ಸವಗಳೊಂದಿಗೆ ಜಾತ್ರೆ/ಮೇಳಗಳನ್ನು ನಡೆಸದಂತೆ ಆದೇಶಿಸಲಾಗಿದೆ.

* ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು, ದೈಹಿಕ ಅಂತರ ಕಾಪಾಡಿಕೊಳ್ಳುವುದು, ಸಾರ್ವಜನಿಕ ಸ್ಥಳಗಳಲ್ಲಿ ಉಗುಳದಿರುವುದು ಈ ಸೂಚನೆಯನ್ನು ಪಾಲಿಸುವುದು ಕಡ್ಡಾಯವಾಗಿರುತ್ತದೆ. ತಪ್ಪಿದ್ದಲ್ಲಿ ಸಂಬಂಧಿತ ಅಧಿಕಾರಿಗಳಿಂದ ಸರ್ಕಾರದ ಆದೇಶದಂತೆ ಕಾನೂನು ಕ್ರಮ ಕೈಗೊಳ್ಳುವುದು.

- Advertisement -
spot_img

Latest News

error: Content is protected !!