Sunday, May 5, 2024
Homeಕರಾವಳಿಮಂಗಳೂರು: ಗರ್ಭಿಣಿಗೆ ಸೂಕ್ತ ಚಿಕಿತ್ಸೆ ಸಿಗದೆ ಮಗು ಸತ್ತ ಪ್ರಕರಣ, ತನಿಖೆಗೆ ಡಿಸಿ ಆದೇಶ

ಮಂಗಳೂರು: ಗರ್ಭಿಣಿಗೆ ಸೂಕ್ತ ಚಿಕಿತ್ಸೆ ಸಿಗದೆ ಮಗು ಸತ್ತ ಪ್ರಕರಣ, ತನಿಖೆಗೆ ಡಿಸಿ ಆದೇಶ

spot_img
- Advertisement -
- Advertisement -

ಮಂಗಳೂರು: ದುಬೈಯಿಂದ ಮೇ.12 ತಾರೀಕಿನಂದು ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ ಕ್ವಾರಂಟೈನ್ ನಲ್ಲಿದ್ದ ಗರ್ಭಿಣಿಗೆ ಸೂಕ್ತ ಚಿಕಿತ್ಸೆ ಸಿಗದೆ ಗರ್ಭದಲ್ಲೇ ಮಗು ಸಾವಿಗೀಡಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣದ ಕುರಿತು ವಸ್ತುನಿಷ್ಠ ತನಿಖೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಆದೇಶ ನೀಡಿದ್ದಾರೆ.

ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಸ್ನೇಹಲ್ ಅವರ ಅಧ್ಯಕ್ಷತೆಯಲ್ಲಿ ಒಂಬತ್ತು ಮಂದಿಯ ವಿಚಾರಣಾ ಸಮಿತಿಯನ್ನು ರಚಿಸಲಾಗಿದ್ದು, ಶೀಘ್ರದಲ್ಲೇ ಸತ್ಯಾಸತ್ಯತೆಯ ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಮೇ 12ರಂದು ಈ ಗರ್ಭಿಣಿ ದುಬೈನಿಂದ ಬಂದಿದ್ದರು. ವಿದೇಶದಿಂದ ಬಂದ ಹಿನ್ನೆಲೆ ಅವರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಕ್ವಾರಂಟೈನ್ ನಲ್ಲಿದ್ದ ವೇಳೆ ಅವರ ವರದಿ ನೆಗೆಟಿವ್ ಬಂದಿದೆ. ಈ ಕಾರಣದಿಂದ ಅಪಾರ್ಟ್ ಮೆಂಟ್ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಾಗಲು ಗರ್ಭಿಣಿ ಬಯಸಿದ್ದರು. ಆದರೆ ಅದಕ್ಕೆ ಅವಕಾಶ ಸಿಕ್ಕಿರಲಿಲ್ಲ. ಈ ಕಾರಣದಿಂದಾಗಿ ಲಾಡ್ಜ್ ನಲ್ಲೇ ಉಳಿದುಕೊಂಡಿದ್ದರು. ಈ ಸಂದರ್ಭದಲ್ಲಿ ಅವರಿಗೆ ಸೂಕ್ತ ಚಿಕಿತ್ಸೆ ಸಿಗದೆ ಮಗು ಸಾವಿಗೀಡಾಗಿದೆ ಎಂಬ ಆರೋಪ ವ್ಯಕ್ತವಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಕುಟುಂಬದ ಸದಸ್ಯರು ಜಿಲ್ಲಾಧಿಕಾರಿ‌ ಅವರನ್ನು ನಿನ್ನೆ ಭೇಟಿಯಾಗಿ ಮನವಿ ಸಲ್ಲಿಸಿದರು.

- Advertisement -
spot_img

Latest News

error: Content is protected !!