Monday, June 8, 2026
Homeಕರಾವಳಿಉಡುಪಿಕುಂದಾಪುರ: ಮಂದಾರ್ತಿ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ ಹಿನ್ನೆಲೆ; ದೇವಸ್ಥಾನ ವ್ಯಾಪ್ತಿಯ ಪ್ರದೇಶಗಳಲ್ಲಿ...

ಕುಂದಾಪುರ: ಮಂದಾರ್ತಿ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ ಹಿನ್ನೆಲೆ; ದೇವಸ್ಥಾನ ವ್ಯಾಪ್ತಿಯ ಪ್ರದೇಶಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

- Advertisement -
- Advertisement -

ಕುಂದಾಪುರ ; ಮಂದಾರ್ತಿ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯ ಹಿನ್ನೆಲೆ ಫೆಬ್ರವರಿ 13 ರಿಂದ 15 ರವರೆಗೆ ದೇವಸ್ಥಾನ ವ್ಯಾಪ್ತಿಯ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಹೆಗ್ಗುಂಜೆ ಮತ್ತು ಶಿರೂರು ಗ್ರಾಮ ವ್ಯಾಪ್ತಿಯಲ್ಲಿರುವ ಎಲ್ಲಾ ರೀತಿಯ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳಲ್ಲಿ ಮದ್ಯ ಮಾರಾಟವನ್ನು ಫೆಬ್ರವರಿ 13 ರ ಸಂಜೆ 6 ರಿಂದ ಫೆಬ್ರವರಿ 15 ರ ರಾತ್ರಿ 12 ರ ವರೆಗೆ ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಮೇಲ್ಕಂಡ ಗ್ರಾಮಗಳ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.

- Advertisement -

Latest News

error: Content is protected !!