Saturday, May 4, 2024
Homeಕರಾವಳಿಬೆಳ್ತಂಗಡಿ: ಮಿತ್ತಬಾಗಿಲು ಕಾಳಜಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ.ಕೆ.ವಿ ಭೇಟಿ

ಬೆಳ್ತಂಗಡಿ: ಮಿತ್ತಬಾಗಿಲು ಕಾಳಜಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ.ಕೆ.ವಿ ಭೇಟಿ

spot_img
- Advertisement -
- Advertisement -

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಬೀಳುತ್ತಿರುವುದರಿಂದ ನೇತ್ರಾವತಿ ಹಾಗೂ ಇತರ ನದಿಗಳು, ಉಪನದಿಗಳು ಉಕ್ಕಿ ಹರಿಯುತ್ತಿವೆ. ಈ ಹಿನ್ನಲೆಯಲ್ಲಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಗಣೇಶ್ ನಗರವನ್ನು ಅಪಾಯಕಾರಿ ಪ್ರದೇಶ ಎಂದು ಗುರುತಿಸಿ ಇಲ್ಲಿ ವಾಸವಾಗಿರುವ 32 ಕುಟುಂಬಗಳನ್ನು ಕಳೆದ ವಾರವೇ ಸಮೀಪದ ಶಾಲೆಯಲ್ಲಿ ಕಾಳಜಿ ಕೇಂದ್ರವನ್ನು ಸ್ಥಾಪಿಸಿ ಅಲ್ಲಿಗೆ ಸ್ಥಳಾಂತರಿಸಲಾಗಿತ್ತು.

ಜಿಲ್ಲಾಡಳಿತದ ಸೂಚನೆಯಂತೆ ಈ ಕಾಳಜಿ ಕಾರ್ಯ ನಿರ್ವಹಿಸುತ್ತಿದ್ದು, ಇಂದು ಇಲ್ಲಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ.ಕೆ.ವಿ ಭೇಟಿ ನೀಡಿ, ಸರಕಾರಿ ಶಾಲೆಯ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಜನರ ಕ್ಷೇಮವನ್ನು ವಿಚಾರಿಸಿದರು. ಹಾಗೆಯೆ ಈ ಭಾಗದಲ್ಲಿ ಮುಂದಿನ ದಿನಗಳಲ್ಲಿ ಆಗಬೇಕಾಗಿರುವ ಕಾರ್ಯಗಳ ಮನವಿಯನ್ನು ಜನರಿಂದ ಪಡೆದರು.

ಈ ಸಂದರ್ಭದಲ್ಲಿ ಪುತ್ತೂರು ವಿಭಾಗದ ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್, ಬೆಳ್ತಂಗಡಿ ತಹಶೀಲ್ದಾರ್ ಮಹೇಶ್.ಜೆ, ಆರೋಗ್ಯಧಿಕಾರಿ ಡಾ.ಕಲಾಮಧು , ಲೋಕಪಯೋಗಿ ಸಹಾಯಕ ಇಂಜಿನಿಯರ್ ಶಿವಪ್ರಸಾದ್ ಅಜಿಲ , ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಕುಸುಮಧರ್.ಬಿ, ಮಿತ್ತಬಾಗಿಲು ಪಿಡಿಓ ಜಯಕೀರ್ತಿ , ಕಂದಾಯ ನಿರೀಕ್ಷಕ ಪ್ರತೀಶ್ , ಗ್ರಾಮ ಲೆಕ್ಕಿಗ ಹರೀಶ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!