Thursday, March 28, 2024
Homeಕರಾವಳಿಸೀಲ್ ಡೌನ್ ಆದ ಬಂಟ್ವಾಳಕ್ಕೆ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಭೇಟಿ

ಸೀಲ್ ಡೌನ್ ಆದ ಬಂಟ್ವಾಳಕ್ಕೆ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಭೇಟಿ

spot_img
- Advertisement -
- Advertisement -

ಬಂಟ್ವಾಳ. ಎ-22: ದ.ಕ. ಜಿಲ್ಲಾಧಿಕಾರಿಸಿಂಧು ಬಿ ರೂಪೇಶ್ ಅವರು ಬುಧವಾರ ಬೆಳಗ್ಗೆ ಬಂಟ್ವಾಳ ಪೇಟೆಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಯನ್ನು ಪರಾಮರ್ಶಿಸಿದರು. ಈ ವೇಳೆ ಪುರಸಭೆಯ ಸಹಾಯವಾಣಿಗೂ ಭೇಟಿ ನೀಡಿದ ಅವರು ಅಲ್ಲಿನ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿದರು.
ಈಗಾಗಲೇ ಬಂಟ್ವಾಳ ಪೇಟೆಯ ಹೃದಯ ಭಾಗದಲ್ಲಿರುವ ಪ್ರದೇಶದಲ್ಲಿ ಕೋವಿಡ್ ನಿಂದ ಒಬ್ಬರು ಮೃತಪಟ್ಟಿದ್ದು, ಮತ್ತೊಬ್ಬರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆ ಪ್ರದೇಶದ ಸುತ್ತಮುತ್ತಲು ಕಂಟೈನ್ಮೆಂಟ್ ವಲಯ ಎಂದು ಗುರುತಿಸಲಾಗಿದೆ.
ಈ ಜಾಗದಲ್ಲಿ ವಾಸಿಸುವ ವಾಸಿಸುವವರಿಗೆ ದೂರವಾಣಿ ಸಂಖ್ಯೆ ಇರುವ ಕರಪತ್ರವನ್ನು ನೀಡಲಾಗಿದ್ದು, ಪುರಸಭೆ ಸಹಾಯವಾಣಿಯ ಸಂಖ್ಯೆಯನ್ನೂ ಒದಗಿಸಲಾಗಿದೆ. ಇದರ ಕಾರ್ಯಚಟುವಟಿಕೆಗಳನ್ನು ಜಿಲ್ಲಾಧಿಕಾರಿ ವೀಕ್ಷಿಸಿ ತೃಪ್ತಿ ವ್ಯಕ್ತಪಡಿಸಿದರು. ಇದೇ ಸಂದರ್ಭ ಕಂಟೈನ್ಮೆಂಟ್ ಪ್ರದೇಶದ ವ್ಯಾಪ್ತಿಯಲ್ಲಿ ಇರುವ ರೇಶನ್ ಅಂಗಡಿಗಳನ್ನು ಅದರ ಹೊರಗಿನ ಭಾಗಕ್ಕೆ ಸ್ಥಳಾಂತರಗೊಳಿಸುವಂತೆ ಅವರು ಸೂಚನೆ ನೀಡಿದರು.

ಪ್ರೊಬೆಶನರಿ ಐಎಎಸ್ ಅಧಿಕಾರಿ ರಾಹುಲ್ ಶಿಂಧೆ, ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್., ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ಸರ್ಕಲ್ ಇನ್ಸ್ ಪೆಕ್ಟರ್ ನಾಗರಾಜ್, ಎಸ್ಸೈ ಅವಿನಾಶ್, ಕಂದಾಯ ನಿರೀಕ್ಷಕರಾದ ರಾಮ ಕಾಟಿಪಳ್ಳ, ನವೀನ್ ಬೆಂಜನಪದವು, ವಿಎ ರಾಜು ಲಮಾಣಿ, ಜನಾರ್ದನ ಸಹಿತ ಕಂದಾಯ, ಆರೋಗ್ಯ, ಪುರಸಭೆ, ಪೊಲೀಸ್ ಅಧಿಕಾರಿ, ಸಿಬ್ಬಂದಿ ಈ ಸಂದರ್ಭ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!