Friday, June 5, 2026
Homeಕರಾವಳಿದ.ಕ. ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ

ದ.ಕ. ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ಉಂಟಾಗಿರುವ ನೆರೆ ಪರಿಸ್ಥಿತಿಯಿಂದ ಹಾನಿ ಸಂಭವಿಸಿರುವ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪುತ್ತೂರು ತಾಲೂಕಿನ ಉಪ್ಪಿನಂಗಡಿ, ಉಳ್ಳಾಲ ತಾಲೂಕಿನ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬಂಟ್ವಾಳ ತಾಲೂಕಿನ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಮುಲ್ಲೈ ಮುಗಿಲನ್, ನೀರು ನುಗ್ಗಿರುವ‌ ಮನೆಗಳನ್ನು ಸ್ವಚ್ಛಗೊಳಿಸಿ ಸ್ಯಾನಿಟೈಸೇಷನ್ ಮಾಡುವಂತೆ ಬಂಟ್ವಾಳ ಪುರಸಭೆಗೆ ಆದೇಶ ನೀಡಿದ್ದಾರೆ.

ಬಂಟ್ವಾಳದಲ್ಲಿ ನಾಲ್ಕು ಮನೆಗಳಿಗೆ ನೆರೆ ನೀರು ನುಗ್ಗಿದ್ದು, 7 ರಿಂದ 9 ಮನೆಗಳ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಅಲ್ಲದೇ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವ ಬಗ್ಗೆಯೂ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ.

- Advertisement -

Latest News

error: Content is protected !!