Thursday, April 25, 2024
Homeತಾಜಾ ಸುದ್ದಿ"ವಿದ್ಯಾರ್ಥಿಗಳು ಕಾಲೇಜಿಗೆ ಬರಬೇಕೆಂಬ ಒತ್ತಾಯ ಇಲ್ಲ"

“ವಿದ್ಯಾರ್ಥಿಗಳು ಕಾಲೇಜಿಗೆ ಬರಬೇಕೆಂಬ ಒತ್ತಾಯ ಇಲ್ಲ”

spot_img
- Advertisement -
- Advertisement -

ಬೆಂಗಳೂರು: ‘ಕೋವಿಡ್ ಸುರಕ್ಷತಾ ಮಾರ್ಗಸೂಚಿಯೊಂದಿಗೆ ಕಾಲೇಜು ಆರಂಭವಾಗಿದೆ, ಕಾಲೇಜಿಗೆ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬರುತ್ತಿದ್ದಾರೆ, ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬರಲಿದ್ದಾರೆ. ವಿದ್ಯಾರ್ಥಿಗಳು ಕಾಲೇಜಿಗೆ ಬರಬೇಕೆಂಬ ಒತ್ತಾಯ ಇಲ್ಲ, ಆಫ್ ಲೈನ್ ತರಗತಿಗೆ ಹಾಜರಾಗಲು ಸಾಧ್ಯವಾಗವದರಿಗೆ ಆನ್ ಲೈನ್ ಮೂಲಕ ಕ್ಲಾಸ್ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಕೊರೊನಾ ಭೀತಿಯ ನಡುವೆ ರಾಜ್ಯಾದ್ಯಂತ ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿಗಳು ಪುನಾರಂಭಗೊಂಡಿದ್ದು, ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸರ್ಕಾರದ ಸೂಚನೆಯಂತೆ ಕಾಲೇಜಿಗೆ ಆಗಮಿಸುವ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು, ಕಾಲೇಜು ಸಿಬ್ಬಂದಿಗೆ ಕೋವಿಡ್ ಟೆಸ್ಟ್ ಪ್ರಮಾಣ ಪತ್ರ ಕಡ್ಡಾಯಗೊಳಿಸಲಾಗಿದೆ. ಕಾಲೇಜು ಆರಂಭದ ದಿನಗಳಲ್ಲಿ ಕಾಲೇಜಿಗೆ ಬರುವ ವಿದ್ಯಾರ್ಥಿಗಳ ಸಂಖ್ಯೆ ಬಹುತೇಕ ಕಡಿಮೆಯಾಗಿದೆ ಎಂದು ಸಚಿವ ಅಶ್ವಥ್ ನಾರಾಯಣ್ ಹೇಳಿದ್ದಾರೆ.

- Advertisement -
spot_img

Latest News

error: Content is protected !!