Wednesday, May 1, 2024
Homeತಾಜಾ ಸುದ್ದಿಡಿಸಿಎಂ ಲಕ್ಷ್ಮಣ ಸವದಿ ಪುತ್ರನ ಕಾರು ಬೈಕ್ ಗೆ ಡಿಕ್ಕಿ, ಸವಾರ ದುರ್ಮರಣ

ಡಿಸಿಎಂ ಲಕ್ಷ್ಮಣ ಸವದಿ ಪುತ್ರನ ಕಾರು ಬೈಕ್ ಗೆ ಡಿಕ್ಕಿ, ಸವಾರ ದುರ್ಮರಣ

spot_img
- Advertisement -
- Advertisement -

ಬಾಗಲಕೋಟೆ: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪುತ್ರನ ಕಾರು ಬೈಕ್‌ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ವ್ಯಾಪ್ತಿಯ ಕೂಡಲಸಂಗಮ ಕ್ರಾಸ್ ಬಳಿ ನಡೆದಿದೆ.

ಲಕ್ಷ್ಮಣ ಸವದಿ ಹಿರಿಯ ಮಗ ಚಿದಾನಂದ ಸವದಿ ಸೇರಿದಂತೆ 12 ಮಂದಿ ಎರಡು ಕಾರಿನಲ್ಲಿ ಪ್ರವಾಸಕ್ಕೆ ತೆರಳಿದ್ದರು. ಲಕ್ಷ್ಮಣ ಸವದಿ ಮಗ ಚಿದಾನಂದ ಕೆಎ22 ಎಂಸಿ5151 ನಂ. ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಇದೇ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರನ ತಲೆಗೆ ಗಂಭೀರ ಗಾಯಗಳಾಗಿದ್ದವು. ಹೀಗಾಗಿ ಸವಾರನನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಆದ್ರೆ ಆಸ್ಪತ್ರೆಗೆ ಸೇರಿದ ಕೆಲವೇ ಕ್ಷಣಗಳಲ್ಲಿ ಕೂಡಲೆಪ್ಪ ಮೃತಪಟ್ಟಿದ್ದಾರೆ.

ವಿಪರ್ಯಾಸವೆಂದರೆ ಬೈಕ್‌ಗೆ ಡಿಕ್ಕಿ ಬಳಿಕ ಸವಾರನನ್ನು ಆಸ್ಪತ್ರೆಗೆ ಸೇರಿಸುವ ಬದಲು ತಮ್ಮ ವಾಹನದ ನಂಬರ್ ಜಖಂಗೊಳಿಸಿ ಹೊರಡಲು ಯತ್ನಿಸಿದ್ದಾರೆ. ಚಿದಾನಂದ ಮತ್ತೊಂದು ವಾಹನದಲ್ಲಿ ತೆರಳಲು ಮುಂದಾಗಿದ್ದ. ಅಪಘಾತ ಮಾಡಿದ ಕಾರು ಯಾರದ್ದೆಂದು ತಿಳಿಯದಂತೆ ನೋಡಿಕೊಳ್ಳಲು ಪ್ರಯತ್ನಿಸಿದ್ದಾನೆ. ಆದರೆ ಸ್ಥಳೀಯರು ಚಿದಾನಂದನನ್ನು ತಪ್ಪಿಸಿಕೊಳ್ಳಲು ಬಿಡದೆ ಕೆಲಹೊತ್ತು ಹಿಡಿದು ಕೂರಿಸಿದ್ದಾರೆ.

ಘಟನೆ ನಡೆದ ತಕ್ಷಣ ಗಾಬರಿಗೊಂಡ ಚಿದಾನಂದ ತಂದೆಗೆ ಕರೆ ಮಾಡಿದ್ದು, ಲಕ್ಷ್ಮಣ್ ಸವದಿ ತಕ್ಷಣವೇ ಬಾಗಲಕೋಟೆ ಎಸ್ ಪಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ. ಘಟನೆಯ ಕುರಿತು ಚಿದಾನಂದ ಸವದಿ ಖಾಸಗಿ ಮಾಧ‍್ಯಮಕ್ಕೆ ಹೇಳಿಕೆ ಕೊಟ್ಟಿದ್ದು, ತಪ್ಪಿಸಿಕೊಳ್ಳಲು ಯತ್ನಿಸಿಲ್ಲ. ಘಟನೆ ಬಗ್ಗೆ ನೋವಾಗಿದೆ. ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಯಾರಿಗೂ ಧಮ್ಕಿ ಹಾಕಿಲ್ಲ. ಆಕಸ್ಮಿಕವಾಗಿ ಈ ಅಪಘಾತ ನಡೆದಿದೆ ಎಂದಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಮೃತರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

- Advertisement -
spot_img

Latest News

error: Content is protected !!